ನವದೆಹಲಿ: ಎರಡನೇ ಹಂತದ ಲೋಕಸಭೆ ಚುನಾವಣೆಗೆ 12 ರಾಜ್ಯಗಳ 88 ಸಂಸದೀಯ ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದು ಆರಂಭವಾಗಿದೆ.
ಏಪ್ರಿಲ್ 26 ರಂದು ನಡೆಯಲಿರುವ ಸಂಸತ್ತಿನ ಎರಡನೇ ಹಂತದ ಚುನಾವಣೆಗೆ ಗುರುವಾರ ಮುಂಜಾನೆ ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ.
ಈ ಹಂತದ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ.
ಏಪ್ರಿಲ್ 5 ರಂದು, ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 6 ರಂದು ಪರಿಶೀಲನೆ ನಡೆಯಲಿದೆ.
ಈ ಹಂತದಲ್ಲಿ ಹೊರ ಮಣಿಪುರ ಲೋಕಸಭಾ ಕ್ಷೇತ್ರದ ಒಂದು ಭಾಗದಲ್ಲಿ ಮತದಾನವೂ ನಡೆಯಲಿದೆ. ಹೊರ ಮಣಿಪುರ ಕ್ಷೇತ್ರದ ಚುನಾವಣೆಯ ಅಧಿಸೂಚನೆಯನ್ನು ಮಾರ್ಚ್ 20 ರಂದು ಮೊದಲ ಹಂತದ ಗೆಜೆಟ್ ಅಧಿಸೂಚನೆಯಲ್ಲಿ ಸೇರಿಸಲಾಗಿದೆ.
ಹೊರ ಮಣಿಪುರ ಲೋಕಸಭಾ ಕ್ಷೇತ್ರದ ಹದಿನೈದು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಕ್ಷೇತ್ರದ ಹದಿಮೂರು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
ಅಸ್ಸಾಂ, ಬಿಹಾರ, ಛತ್ತೀಸ್ಗಢ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ ಮತ್ತು ಮಣಿಪುರ, ಪಶ್ಚಿಮ ಬಂಗಾಳ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.