ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳು ದಿನನಿತ್ಯ ನಡೆಯುತ್ತಲೇ ಇದೆ. ಇಲ್ಲಿಯವರೆಗೂ ಸಿ-ವಿಜಿಲ್ ಆ್ಯಪ್ ಮೂಲಕ 79,000 ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ದೂರು ಸ್ವೀಕರಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.
ಸ್ವೀಕರಿಸಲಾದ ದೂರುಗಳ ಪೈಕಿ ಶೇ.90 ಕ್ಕಿಂತ ಹೆಚ್ಚಿನ ದೂರುಗಳನ್ನು ಪರಿಹರಿಸಲಾಗಿದೆ. ಶೇ. 89 ರಷ್ಟು ದೂರುಗಳನ್ನು 100 ನಿಮಿಷಗಳಲ್ಲಿ ಬಗೆಹರಿಸಲಾಗಿದೆ. ಅಕ್ರಮ ಹೋರ್ಡಿಂಗ್ಗಳು ಮತ್ತು ಬ್ಯಾನರ್ಗಳ ವಿರುದ್ಧ 58,500 ಕ್ಕೂ ಹೆಚ್ಚು ದೂರುಗಳುಸ್ವೀಕರಿಸಲ್ಪಟ್ಟಿವೆ, ಹಣ, ಉಡುಗೊರೆಗಳು ಮತ್ತು ಮದ್ಯ ವಿತರಣೆಗೆ ಸಂಬಂಧಿಸಿದಂತೆ 1,400 ಕ್ಕೂ ಹೆಚ್ಚು ದೂರುಗಳು ಬಂದಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಶೇ. 3 ರಷ್ಟು ಅಂದರೆ 2,454 ದೂರುಗಳು ಆಸ್ತಿ ಹಾನಿಗೆ ಸಂಬಂಧಿಸಿದೆ. ಬಂದೂಕು ಪ್ರದರ್ಶನ ಮತ್ತು ಬೆದರಿಕೆಗೆ ಸಂಬಂಧಿಸಿದಂತೆ 535 ದೂರುಗಳು ಬಂದಿದ್ದು, 529 ದೂರುಗಳನ್ನು ಪರಿಹರಿಸಲಾಗಿದೆ. ಅನುಮತಿ ಅವಧಿ ಮೀರಿ ಸ್ಪೀಕರ್ ಬಳಕೆಗೆ ಸಂಬಂಧಿಸಿದ ದೂರುಗಳು ಸೇರಿದಂತೆ ಅವಧಿ ಮೀರಿದ ಪ್ರಚಾರಕ್ಕಾಗಿ ಒಟ್ಟು 1,000 ದೂರುಗಳು ಬಂದಿರುವುದಾಗಿ ಚುನಾವಣಾ ಸಮಿತಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.