ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಸಮಿತಿಯ ಪಟ್ಟಿಯನ್ನು ಇಂದು ಪ್ರಕಟಿಸಿದೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ರಕ್ಷಣಾ ಸಚಿವ ಮತ್ತು ಬಿಜೆಪಿಯ ಮಾಜಿ ಮುಖ್ಯಸ್ಥ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಸಮಿತಿಯನ್ನು ಘೋಷಿಸಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಿಯೂಷ್ ಗೋಯಲ್ ಅವರನ್ನು ಕ್ರಮವಾಗಿ ಸಮಿತಿಯ ಸಂಚಾಲಕ ಮತ್ತು ಸಹ ಸಂಚಾಲಕರನ್ನಾಗಿ ನೇಮಿಸಲಾಗಿದೆ.
ಇತ್ತೀಚೆಗಷ್ಟೇ ಬೇರೆ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾಗಿರುವ ಹಲವು ನಾಯಕರ ಹೆಸರು ಪಟ್ಟಿಯಲ್ಲಿದೆ. ರಾಜನಾಥ್ ಸಿಂಗ್ ಈ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಈ ಸಮಿತಿಯು ವಿವಿಧ ರಾಜ್ಯಗಳ 27 ಸದಸ್ಯರನ್ನು ಒಳಗೊಂಡಿದೆ. ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್ರಾಮ್ ಮೇಘವಾಲ್ ಹೆಸರು ಪಟ್ಟಿಯಲ್ಲಿ ಇದೆ.
ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಉತ್ಸಾಹದಲ್ಲಿ ಇರುವ ನರೇಂದ್ರ ಮೋದಿ ಸರ್ಕಾರ ಈ ಬಾರಿ ಯಾವ ರೀತಿಯ ಭರವಸೆಗಳನ್ನು ಜನರಿಗೆ ತನ್ನ ಪ್ರಣಾಳಿಕೆ ಮೂಲಕ ನೀಡಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.
भाजपा राष्ट्रीय अध्यक्ष श्री @JPNadda ने लोकसभा चुनाव-2024 के लिए चुनाव घोषणा-पत्र समिति का गठन किया है।
BJP National President Shri JP Nadda has announced Election Manifesto Committee for the Lok Sabha Elections – 2024. pic.twitter.com/KMrBpqkQQF
— BJP (@BJP4India) March 30, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.