ನವದೆಹಲಿ: ಅರುಣಾಚಲ ಪ್ರದೇಶದ 30 ವಿವಿಧ ಸ್ಥಳಗಳ ಹೊಸ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ. ಈ ಮೂಲಕ ಅರುಣಾಚಲ ಪ್ರದೇಶ ತನಗೆ ಸೇರಿದ್ದು ಎಂಬ ಮೊಂಡು ವಾದವನ್ನು ಪುನರುಚ್ಛರಿಸಿದೆ.
ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡುವುದನ್ನು ಭಾರತ ತಿರಸ್ಕರಿಸಿದೆ, ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಪ್ರತಿಪಾದಿಸಿದೆ ಮತ್ತು ಹೊಸ ಹೆಸರುಗಳನ್ನು ಆವಿಷ್ಕರಿಸುವುದರಿಂದ ವಾಸ್ತವ ಬದಲಾಗುವುದಿಲ್ಲ ಎಂದಿದೆ.
ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್ನಲ್ಲಿ ಪ್ರಮಾಣೀಕೃತ ಭೌಗೋಳಿಕ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಇದು ದಕ್ಷಿಣ ಟಿಬೆಟ್ನ ಭಾಗವೆಂದು ಚೀನಾ ಹೇಳಿಕೊಳ್ಳುವ ಅರುಣಾಚಲ ಪ್ರದೇಶವಾಗಿದೆ. ಇದಕ್ಕೀಗ ಚೀನಾವು ಚೀನೀ ಹೆಸರುಗಳನ್ನು ಇಟ್ಟಿದೆ ಎಂದು ಸರ್ಕಾರಿ ಗ್ಲೋಬಲ್ ಟೈಮ್ಸ್ ಭಾನುವಾರ ವರದಿ ಮಾಡಿದೆ.
ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಜಂಗ್ನಾನ್ನಲ್ಲಿನ ಆರು ಸ್ಥಳಗಳ ಪ್ರಮಾಣಿತ ಹೆಸರುಗಳ ಮೊದಲ ಪಟ್ಟಿಯನ್ನು 2017 ರಲ್ಲಿ ಬಿಡುಗಡೆ ಮಾಡಿತು, 15 ಸ್ಥಳಗಳ ಎರಡನೇ ಪಟ್ಟಿಯನ್ನು 2021 ರಲ್ಲಿ ಬಿಡುಗಡೆ ಮಾಡಲಾಯಿತು ನಂತರ 2023 ರಲ್ಲಿ 11 ಸ್ಥಳಗಳಿಗೆ ಹೆಸರುಗಳೊಂದಿಗೆ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ
ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ಸೇಲಾ ಸುರಂಗವನ್ನು ರಾಷ್ಟ್ರಕ್ಕೆ ಅರ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರು ಅರುಣಾಚಲ ಪ್ರದೇಶಕ್ಕೆ ನೀಡಿದ ಭೇಟಿಯನ್ನು ಚೀನಾ ಖಂಡಿಸಿ ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆಯನ್ನು ಸಲ್ಲಿಸಿತ್ತು. ಆದರೆ ಭಾರತ ಚೀನಾದ ಖಂಡನೆಯನ್ನು ತಿರಸ್ಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.