ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು,
ಒಡೆಯರ್ ಇಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಶುಭ ಗಳಿಗೆ ಸಿಕ್ಕ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ರಾಜ್ಯ ಮಟ್ಟದ ನಾಯಕರು ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಪಿಸಿ ಮೋಹನ್ ಗೆ ಸಾಥ್.
ತುಮಕೂರಿನಲ್ಲಿ ವಿ.ಸೋಮಣ್ಣ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರೊಂದಿಗೆ ಮಾಜಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.