ನವದೆಹಲಿ: ಗಡಿಯಲ್ಲಿನ ಉದ್ವಿಗ್ನತೆ ಶಮನವಾಗದ ಹೊರತು ಪಾಕಿಸ್ಥಾನದೊಂದಿಗೆ ವ್ಯಾಪಾರ ಮಾಡುವ ಯಾವುದೇ ಸಾಧ್ಯತೆ ಇಲ್ಲ ಎಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ.
ನಿನ್ನೆ ಸೂರತ್ನಲ್ಲಿ ದಕ್ಷಿಣ ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಯೋಜಿಸಿದ್ದ “ಭಾರತದ ಆರ್ಥಿಕ ಏರಿಕೆ” ಕುರಿತ ಕಾರ್ಪೊರೇಟ್ ಶೃಂಗಸಭೆಯಲ್ಲಿ ಡಾ. ಜೈಶಂಕರ್ ಮಾತನಾಡುತ್ತಿದ್ದರು. ಈ ವೇಳೆ ಅವರು ಯಾವುದೇ ರೀತಿಯ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದರು.
ಅರುಣಾಚಲ ಪ್ರದೇಶದ ಮೇಲೆ ಹಕ್ಕುಗಳನ್ನು ಪ್ರತಿಪಾದಿಸುತ್ತಿರುವ ಚೀನಾವನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಅರುಣಾಚಲ ಪ್ರದೇಶವು ಭಾರತದ ರಾಜ್ಯವಾಗಿದೆ ಮತ್ತು ಯಾವಾಗಲೂ ಭಾರತದ ರಾಜ್ಯವಾಗಿರುತ್ತದೆ ಮತ್ತು ಹೆಸರುಗಳನ್ನು ಬದಲಾಯಿಸುವುದರಿಂದ ಈ ಸತ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಇನ್ನೊಂದೆಡೆ, ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಅರುಣಾಚಲ ಪ್ರದೇಶದ 30 ಸ್ಥಳಗಳಿಗೆ ಚೀನಾ ಕಾನೂನುಬಾಹಿರವಾಗಿ ತನ್ನ ಭೌಗೋಳಿಕ ಹೆಸರುಗಳನ್ನು ನೀಡಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಿಜಿಜು ಅವರು, ಚೀನಾ ಸಂಪೂರ್ಣ ಆಧಾರರಹಿತ ಹಕ್ಕುಗಳನ್ನು ಮುಂದಿಡುತ್ತಿದೆ ಆದರೆ ಅದು ನೆಲದ ವಾಸ್ತವ ಮತ್ತು ‘ಐತಿಹಾಸಿಕ ಸಂಗತಿಗಳನ್ನು’ ಬದಲಾಯಿಸುವುದಿಲ್ಲ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಭಾಗವಾಗಿದೆ ಮತ್ತು ಅರುಣಾಚಲ ಪ್ರದೇಶದ ಜನರು ಎಲ್ಲಾ ಮಾನದಂಡಗಳು ಮತ್ತು ವ್ಯಾಖ್ಯಾನಗಳ ಮೂಲಕ ಪರಮ ದೇಶಭಕ್ತ ಭಾರತೀಯರಾಗಿದ್ದಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.