ವಿಶ್ವಸಂಸ್ಥೆ: ಅಕ್ಷಯ ಪಾತ್ರ ಫೌಂಡೇಶನ್ ನಾಲ್ಕು ಶತಕೋಟಿ ಊಟವನ್ನು ಪೂರೈಸಿದ ಐತಿಹಾಸಿಕ ಮೈಲಿಗಲ್ಲನ್ನು ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು, ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತದ ಪೂರ್ವಭಾವಿ ಕ್ರಮಗಳನ್ನು ಮತ್ತು ಇತರ ರಾಷ್ಟ್ರಗಳಿಗೂ ಅದನ್ನು ಪರಿಣಾಮಕಾರಿಯಾಗಿ ವಿಸ್ತರಿಸಿದಕ್ಕಾಗಿ ಶ್ಲಾಘನೆಗಳನ್ನು ಇಲ್ಲಿ ವ್ಯಕ್ತಪಡಿಸಲಾಯಿತು.
ಯುಎನ್ಗೆ ಭಾರತದ ಖಾಯಂ ಮಿಷನ್ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. ‘ಆಹಾರ ಭದ್ರತೆಯಲ್ಲಿನ ಸಾಧನೆಗಳು: ಸುಸ್ಥಿರ ಅಭಿವೃದ್ಧಿ ಗುರಿಗಳತ್ತ ಭಾರತದ ದಾಪುಗಾಲುಗಳು’ ಎಂಬ ಶೀರ್ಷಿಕೆಯೊಂದಿಗೆ ಇದನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮ ಆಹಾರ ಭದ್ರತೆ ಮತ್ತು ಪೋಷಣೆಯಲ್ಲಿನ ದೇಶದ ನವೀನ ಕಾರ್ಯತಂತ್ರಗಳು, ನೀತಿಗಳು ಮತ್ತು ಸಾಧನೆಗಳನ್ನು ಪ್ರದರ್ಶಿಸಿದೆ ಮತ್ತು ಅದರ ಶೂನ್ಯ ಹಸಿವಿನ ಗುರಿಯನ್ನು ಪ್ರಶಂಸಿಸಿದೆ.
ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ, ನೊಬೆಲ್ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಮತ್ತು ಅಕ್ಷಯ ಪಾತ್ರ ಫೌಂಡೇಶನ್ನ ಅಧ್ಯಕ್ಷ ಮಧು ಪಂಡಿತ್ ದಾಸ ಅವರು ಭಾರತೀಯ ಎನ್ಜಿಒ ಸಾಧಿಸಿದ ನಾಲ್ಕು ಶತಕೋಟಿ ಊಟದ ಮೈಲಿಗಲ್ಲನ್ನು ಸ್ಮರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.