ನವದೆಹಲಿ: ಖ್ಯಾತ ಬಾಕ್ಸರ್ ಮತ್ತು ಕಾಂಗ್ರೆಸ್ ನಾಯಕನಾಗಿದ್ದ ವಿಜೇಂದರ್ ಸಿಂಗ್ ಅವರು ಲೋಕಸಭೆ ಚುನಾವಣೆಗೂ ಮುನ್ನ ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
2019 ರ ಲೋಕಸಭಾ ಚುನಾವಣೆಯ ಮೊದಲು ಕಾಂಗ್ರೆಸ್ ಸೇರಿದ್ದ ಅವರು ಟಿಕೆಟ್ ಪಡೆದು ದಕ್ಷಿಣ ದೆಹಲಿ ಕ್ಷೇತ್ರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಸೋತು ಹೋಗಿದ್ದರು. ನಂತರವೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಅವರು ರೈತರ ಪ್ರತಿಭಟನೆಗಳನ್ನು ಬೆಂಬಲಿಸಿದರು ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಹೋರಾಟದಲ್ಲಿ ಭಾಗಿಯಾಗಿದ್ದರು.
ಆದರೆ ಇಂದು ಅಚ್ಚರಿ ಎಂಬಂತೆ ಅವರು ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ.
2008ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದಿದ್ದ ಹರಿಯಾಣದ ಭಿವಾನಿ ಜಿಲ್ಲೆಯ 38 ವರ್ಷದ ಬಾಕ್ಸರ್, ಈ ಸಾಧನೆ ಮಾಡಿದ ಮೊದಲ ಭಾರತೀಯ ಬಾಕ್ಸರ್ ಎನಿಸಿಕೊಂಡರು. ಅವರು 2009 ರ ವಿಶ್ವ ಚಾಂಪಿಯನ್ಶಿಪ್ಗಳು ಮತ್ತು 2010 ರ ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಕಂಚಿನ ಪದಕವನ್ನು ಪಡೆದರು, ಜೊತೆಗೆ 2006 ಮತ್ತು 2014 ರ ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಬೆಳ್ಳಿಯನ್ನು ಪಡೆದರು.
2009 ರಲ್ಲಿ, ಅವರು ಈಗ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲ್ಪಡುವ ‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಯನ್ನು ಪಡೆದರು, ನಂತರ 2010 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.