ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಇಂದು ಬೆಳಗ್ಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ರಾಜೀನಾಮೆಯನ್ನು ಘೋಷಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿರುವ ಅವರು, ಪಕ್ಷದ ಕಾರ್ಯಚಟುವಟಿಕೆಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
“ಕಾಂಗ್ರೆಸ್ ಪಕ್ಷವು ಪ್ರಸ್ತುತ ಅನುಸರಿಸುತ್ತಿರುವ ದಿಕ್ಕಿಲ್ಲದ ಹಾದಿಯು ನನಗೆ ಅನಾನುಕೂಲವಾಗಿದೆ. ನಾನು ಸನಾತನ ವಿರೋಧಿ ಘೋಷಣೆಗಳನ್ನು ಬೆಂಬಲಿಸಲು ಸಾಧ್ಯವಿಲ್ಲ ಅಥವಾ ದೇಶದ ಸಂಪತ್ತು ಸೃಷ್ಟಿಕರ್ತರನ್ನು ನಾನು ದಿನವೂ ಟೀಕಿಸಲು ಸಾಧ್ಯವಿಲ್ಲ. ಆದ್ದರಿಂದ ನಾನು ಪಕ್ಷದ ಎಲ್ಲಾ ಸ್ಥಾನಗಳು ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, “ನಾನು ಭಾವುಕನಾಗಿದ್ದೇನೆ. ನನ್ನ ಹೃದಯ ಭಾರವಾಗಿದೆ. ನಾನು ವ್ಯಕ್ತಪಡಿಸಲು, ಬರೆಯಲು ಮತ್ತು ಹಂಚಿಕೊಳ್ಳಲು ಬಹಳಷ್ಟು ಇದೆ. ಆದರೆ, ನನ್ನ ತತ್ವಗಳು ಯಾವುದನ್ನೂ ಹೇಳದಂತೆ ನನ್ನನ್ನು ನಿಷೇಧಿಸಿವೆ” ಎಂದಿದ್ದಾರೆ.
कांग्रेस पार्टी आज जिस प्रकार से दिशाहीन होकर आगे बढ़ रही है,उसमें मैं ख़ुद को सहज महसूस नहीं कर पा रहा.मैं ना तो सनातन विरोधी नारे लगा सकता हूं और ना ही सुबह-शाम देश के वेल्थ क्रिएटर्स को गाली दे सकता.इसलिए मैं कांग्रेस पार्टी के सभी पदों व प्राथमिक सदस्यता से इस्तीफ़ा दे रहाहूं pic.twitter.com/Xp9nFO80I6
— Prof. Gourav Vallabh (@GouravVallabh) April 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.