ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇಲೆ ದೆಹಲಿ ಸಚಿವೆ ಅತಿಶಿ ಅವರಿಗೆ ಭಾರತೀಯ ಚುನಾವಣಾ ಆಯೋಗವು ನೋಟಿಸ್ ಕಳುಹಿಸಿದೆ. ಬಿಜೆಪಿ ವಿರುದ್ಧ ಅವರು ಮಾಡಿದ ಆರೋಪಗಳ ಹಿನ್ನೆಲೆಯಲ್ಲಿಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಬಿಜೆಪಿಗೆ ನಾನು ಪಕ್ಷಾಂತರ ಮಾಡದೇ ಹೋದರೆ ಬಂಧಿಸುವುದಾಗಿ ಬಿಜೆಪಿಗರು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಇತ್ತೀಚಿಗೆ ಆತಿಶಿ ಹೇಳಿಕೊಂಡಿದ್ದರು. ಅವರ ಈ ಟೀಕೆಗಳ ಬಗ್ಗೆ ಬಿಜೆಪಿ ದೂರು ನೀಡಿದೆ ಎಂದು ತಿಳಿಸಿರುವ ಚುನಾವಣಾ ಆಯೋಗ, ಈ ಶನಿವಾರ ಸಂಜೆ 5 ಗಂಟೆಯೊಳಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿದೆ.
ಆಕೆ ಸಚಿವೆಯಾಗಿರುವುದರಿಂದ ಮತದಾರರು ಆಕೆ ಸಾರ್ವಜನಿಕವಾಗಿ ಏನು ಹೇಳಿದರೂ ನಂಬುತ್ತಾರೆ. ಹೀಗಾಗಿ ಆಕೆ ತನ್ನ ಹೇಳಿಕೆಗಳನ್ನು ವಾಸ್ತವಿಕ ಆಧಾರದ ಮೇಲೆ ಸಮರ್ಥಿಸಿಕೊಳ್ಳಬೇಕು ಎಂದು ಚುನಾವಣಾ ಆಯೋಗ ಹೇಳಿದೆ.
ಕಳೆದ ತಿಂಗಳು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ನಂತರ ಎಎಪಿ ವ್ಯವಹಾರಗಳನ್ನು ನಡೆಸುವ ಉನ್ನತ ನಾಯಕರಲ್ಲಿ ಒಬ್ಬರಾಗಿ ಅತಿಶಿ ಕಾಣಿಸಿಕೊಂಡಿದ್ದಾರೆ, ಈ ವಾರದ ಆರಂಭದಲ್ಲಿ ಬಿಜೆಪಿಯು ನನಗೆ ಬೆದರಿಕೆ ಹಾಕಿದೆ ಎಂದು ಅವರು ಹೇಳಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.