ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಚೀನಾ ‘ಮರುನಾಮಕರಣ’ ಮಾಡಿದ್ದರ ಕುರಿತು ಬಲವಾದ ನಿಲುವನ್ನು ತೆಗೆದುಕೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಚೀನಾಗೆ ದೊಡ್ಡ ಪ್ರಶ್ನೆಯನ್ನು ಹಾಕಿದ್ದಾರೆ.
ಭಾರತವು ಚೀನಾದ ಕೆಲವು ಸ್ಥಳಗಳಿಗ ಮರುನಾಮಕರಣ ಮಾಡಿದರೆ, ಅದು ನಮ್ಮದಾಗಬಹುದೇ ಎಂದು ಸಿಂಗ್ ಚೀನಾಗೆ ಪ್ರಶ್ನೆ ಹಾಕಿದ್ದಾರೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಾಗಿ ಅರುಣಾಚಲ ಪೂರ್ವ ಕ್ಷೇತ್ರದ ನಮ್ಸಾಯ್ನಲ್ಲಿ ಸಮಾವೇಶನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಬಿಜೆಪಿ ನೇತೃತ್ವದ ಸರ್ಕಾರವು ಮೂಲಸೌಕರ್ಯ ಮತ್ತು ಗಡಿಯುದ್ದಕ್ಕೂ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.
“ಇದು ನಮ್ಮ ಮನೆ. ಇತ್ತೀಚೆಗೆ ಚೀನಾವು ಅರುಣಾಚಲ ಪ್ರದೇಶದ ಮೂರು ಸ್ಥಳಗಳನ್ನು ಮರುಹೆಸರಿಸಿ ತನ್ನ ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಿದೆ. ಹೆಸರು ಬದಲಾಯಿಸುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ ಎಂದು ನಾನು ನಮ್ಮ ನೆರೆಹೊರೆಯವರಿಗೆ ಹೇಳಲು ಬಯಸುತ್ತೇನೆ. ನಾಳೆ, ನಾವು ಚೀನಾದ ಕೆಲವು ಸ್ಥಳಗಳ ಹೆಸರನ್ನು ಬದಲಾಯಿಸಿದರೆ ಚೀನಾದ ರಾಜ್ಯಗಳು ನಮ್ಮದಾಗುತ್ತದೆಯೇ? ಚೀನಾ ಈ ತಪ್ಪನ್ನು ಮಾಡಬಾರದು” ಎಂದು ಸಿಂಗ್ ಹೇಳಿದರು.
“ಇಂತಹ ಕ್ರಮಗಳು ಭಾರತ ಮತ್ತು ಚೀನಾ ನಡುವಿನ ಸಂಬಂಧವನ್ನು ಹಾಳುಮಾಡುತ್ತವೆ ಎಂದು ನಾನು ಭಾವಿಸುತ್ತೇನೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸ್ನೇಹಿತರನ್ನು ಬದಲಾಯಿಸಬಹುದು ಆದರೆ ಒಬ್ಬರ ನೆರೆಹೊರೆಯವರನ್ನಲ್ಲ ಎಂದು ಹೇಳುತ್ತಿದ್ದರು. ಭಾರತವು ತನ್ನ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಬಯಸುತ್ತದೆ, ಆದರೆ ಯಾರಾದರೂ ನಮ್ಮ ಆತ್ಮಗೌರವಕ್ಕೆ ಧಕ್ಕೆ ತರಲು ಪ್ರಯತ್ನಿಸಿದರೆ, ಈಗಿನ ಭಾರತಕ್ಕೆ ಹಿಮ್ಮೆಟ್ಟಿಸುವ ಶಕ್ತಿ ಇದೆ’’ ಎಂದು ಗುಡುಗಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ದೊಡ್ಡ ಪ್ರಮಾಣದ ಭೂಮಿಯನ್ನು ಚೀನಾಗೆ ಬಿಟ್ಟುಕೊಡಲಾಗಿದೆ ಎಂದು ರಕ್ಷಣಾ ಸಚಿವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಈ ಪ್ರದೇಶದಲ್ಲಿನ ಮೂಲಸೌಕರ್ಯ ಅಭಿವೃದ್ಧಿಯನ್ನು ಸೂಚಿಸಿದ ಸಿಂಗ್, ಈಶಾನ್ಯ ಭಾಗದ ಮೇಲೆ ಪ್ರಧಾನಿ ಮೋದಿಯವರ ಗಮನಕ್ಕೆ ಇದು ಪುರಾವೆಯಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.