ಮುಂಬಯಿ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಬಿಜೆಪಿ ಮೈತ್ರಿಕೂಟಕ್ಕೆ ಹೆಚ್ಚಿನ ಬಲ ದೊರೆತಂತಾಗಿದೆ.
ದಾದರ್ನ ಐತಿಹಾಸಿಕ ಶಿವಾಜಿ ಪಾರ್ಕ್ನಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಮುಂಬರುವ ಚುನಾವಣೆಗಳು ರಾಷ್ಟ್ರದ ಭವಿಷ್ಯಕ್ಕೆ ಅತ್ಯಂತ ನಿರ್ಣಾಯಕವಾಗಿದ್ದು, ಈ ನಿರ್ಣಾಯಕ ಅವಧಿಯಲ್ಲಿ ಪ್ರಬಲ ನಾಯಕತ್ವದ ಅಗತ್ಯವಿದೆ ಮತ್ತು ಇದನ್ನು ಮೋದಿಯಿಂದ ಮಾತ್ರ ನೀಡಬಹುದು ಎಂದು ಹೇಳಿದರು.
ಮೋದಿಗೆ ನಾನು ಬೇಷರತ್ತಾಗಿ ಬೆಂಬಲವನ್ನು ನೀಡುತ್ತಿರುವುದಾಗಿ ಹೇಳಿದ ಅವರು, ನಾನು ಸಂಸತ್ತಿನಲ್ಲಿ ಅಥವಾ ರಾಜ್ಯ ಶಾಸಕಾಂಗದಲ್ಲಿ ಯಾವುದೇ ಸ್ಥಾನವನ್ನು ಕೇಳಿಲ್ಲ ಎಂದಿದ್ದಾರೆ
ನವದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇತ್ತೀಚೆಗೆ ಭೇಟಿಯಾದ ಸಂದರ್ಭದಲ್ಲಿ ಠಾಕ್ರೆ ಅವರಿಂದ ಬೆಂಬಲದ ಬದ್ಧತೆಯನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಠಾಕ್ರೆ ಹೆಚ್ಚಿನ ಪ್ರೇಕ್ಷಕರನ್ನು ಸೆಳೆಯುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂಬುದು ಅವರು ನಿನ್ನೆ ನಡೆಸಿದ ಸಮಾವೇಶದಲ್ಲೂ ಸಾಬೀತಾಗಿದೆ. ಆದರೆ ಅವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸಲು ಸಾಧ್ಯವಾಗುತ್ತದೆಯೇ ಎಂಬುದು ಮುಂದಿರುವ ಸವಾಲು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.