ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 14ರಂದು ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ಮೂಲಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಮಂಗಳೂರಿನ ಲೇಡಿಹಿಲ್ನ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ನಿಂದ ಗೋವಿಂದ ಪೈ ಸರ್ಕಲ್ ( Navabharat Circle) ತನಕ ಪ್ರಧಾನಿ ಮೋದಿಯವರ ಮಂಗಳೂರು ರೋಡ್ ಶೋ ಇರಲಿದೆ.
ಭಾನುವಾರ ಸಂಜೆ 6 ಗಂಟೆಗೆ ರೋಡ್ ಶೋ ಆರಂಭವಾಗಲಿದೆ.
ಈಗಾಗಲೇ ಬಿಜೆಪಿ ರೋಡ್ ಶೋಗೆ ಬೇಕಾದ ಭರದ ಸಿದ್ಧತೆಗಳನ್ನು ನಡೆಸುತ್ತಿದ್ದು, ಲಕ್ಷಾಂತರ ಜನರು ಸೇರುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.