ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿ ಸತತ ಎರಡು ಅವಧಿಗೆ ದೇಶವನ್ನು ಬಲಪಡಿಸಲು ತನ್ನ ಬಹುಮತವನ್ನು ಬಳಸಿದರೆ, ಕಾಂಗ್ರೆಸ್ ತನ್ನ ಕುಟುಂಬವನ್ನು ಬಲಪಡಿಸಲು ದಶಕಗಳ ಬಹುಮತವನ್ನು ಬಳಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನಮ್ಮ ಸರ್ಕಾರವು ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ ಎಂಬುದನ್ನು ಪ್ರತಿಪಕ್ಷಗಳು ಸಹ ನಂಬುತ್ತವೆ ಎಂದು ಪ್ರತಿಪಾದಿಸಿದ್ದಾರೆ.
ಹಿಂದಿ ದೈನಿಕ ಹಿಂದೂಸ್ತಾನ್ಗೆ ನೀಡಿದ ಸಂದರ್ಶನದಲ್ಲಿ, ನಮ್ಮ ನಾಯಕರನ್ನು ಗುರಿಯಾಗಿಸಲು ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂಬ ವಿರೋಧ ಪಕ್ಷಗಳ ಟೀಕೆಗಳ ನಡುವೆ ಭ್ರಷ್ಟರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಬದ್ಧತೆಯನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದ ಅವರು, ತನಿಖಾ ಸಂಸ್ಥೆಗಳ ಕಣ್ಗಾವಲಿನ ಅಡಿಯಲ್ಲಿರುವ ಜನರ ರಾಜಕೀಯ ಭ್ರಷ್ಟಾಚಾರವನ್ನು ಮಾತ್ರ ಗುರಿಯಾಗಿಸಿಕೊಳ್ಳಲಾಗುತ್ತಿದೆ ಎಂದರು.
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕೇವಲ ಶೇ. 3ರಷ್ಟು ಮಂದಿ ಮಾತ್ರ ರಾಜಕೀಯ ಸಂಬಂಧ ಹೊಂದಿದ್ದಾರೆ. ಉಳಿದ ಶೇ.97ರಷ್ಟು ಪ್ರಕರಣಗಳು ಅಧಿಕಾರಿಗಳು ಮತ್ತು ಕ್ರಿಮಿನಲ್ಗಳಿಗೆ ಸಂಬಂಧಿಸಿವೆ. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರ ನಿರ್ಮೂಲನೆಯು ಆದ್ಯತೆಯಾಗಿದೆ ಎಂದು ಅವರು ಹೇಳಿದರು,.
ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಿಗೆ ಸಂದರ್ಶನಗಳನ್ನು ಕೊನೆಗೊಳಿಸುವುದು, ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆ, ಸರ್ಕಾರಿ ಸೇವೆಗಳನ್ನು ಸಾಧ್ಯವಾದಷ್ಟು ಮುಖರಹಿತವಾಗಿಸುವ ಪ್ರಯತ್ನಗಳನ್ನು ಮೋದಿ ಉಲ್ಲೇಖಿಸಿದರು ಮತ್ತ ಬಡವರ ಹಣ ಮಧ್ಯವರ್ತಿಗಳ ಜೇಬಿಗೆ ಹೋಗುವುದನ್ನು ತಡೆಯಲು ಡಿಬಿಟಿ (ನೇರ ಲಾಭ ವರ್ಗಾವಣೆ) ವ್ಯವಸ್ಥೆ ತರಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.