ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿಯ ಅಡಿಯಲ್ಲಿ ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ಚಂದ್ರ ರೆಡ್ಡಿ ಅವರ ಸಂಸ್ಥೆಗೆ ಮಂಜೂರು ಮಾಡಿರುವ ಐದು ಚಿಲ್ಲರೆ ವಲಯಗಳಿಗೆ ಸಂಬಂಧಿಸಿದಂತೆ ಎಎಪಿಗೆ ರೂ. 25 ಕೋಟಿ ನೀಡುವಂತೆ ಬಿಆರ್ಎಸ್ ನಾಯಕಿ ಕೆ.ಕವಿತಾ ಬೆದರಿಕೆ ಹಾಕಿದ್ದರು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ)ದ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಮೊತ್ತವನ್ನು ಪಾವತಿಸದಿದ್ದರೆ, ತೆಲಂಗಾಣ ಮತ್ತು ದೆಹಲಿಯಲ್ಲಿ ಇರುವ ರೆಡ್ಡಿ ಅವರ ವ್ಯವಹಾರಕ್ಕೆ ಹಾನಿಯಾಗುತ್ತದೆ ಎಂದು ರೆಡ್ಡಿಗೆ ಕವಿತಾ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ದೆಹಲಿಯಲ್ಲಿ ನಡೆದ ಆಪಾದಿತ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರೆಡ್ಡಿ, ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಅನುಮೋದಕರಾಗಿ ಬದಲಾಗಿದ್ದು, ಅವರ ವಿರುದ್ಧ ಸಿಬಿಐ ಇನ್ನೂ ಚಾರ್ಜ್ ಶೀಟ್ ಸಲ್ಲಿಸಿಲ್ಲ.
ನ್ಯಾಯಾಲಯವು ಕವಿತಾ ಅವರನ್ನು ಏಪ್ರಿಲ್ 15 ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.