ಜೈಪುರ: ರಾಜಸ್ಥಾನವು ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲಾ 25 ಲೋಕಸಭಾ ಸ್ಥಾನಗಳನ್ನು ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಭಿಲ್ವಾರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಗುರಿಯಾಗಿಸಿ, ಜಲೋರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ವೈಭವ್ ಗೆಹ್ಲೋಟ್ ಅವರ ಚುನಾವಣಾ ಪ್ರಚಾರದಲ್ಲಿ ಅವರು ಸಿಲುಕಿಕೊಂಡಿದ್ದಾರೆ ಎಂದು ಹೇಳಿದರು.
ವೈಭವ್ ಗೆಹ್ಲೋಟ್ ಅವರು ಚುನಾವಣೆಯಲ್ಲಿ ಭಾರಿ ಅಂತರದಿಂದ ಸೋಲಲಿದ್ದಾರೆ ಎಂದು ಶಾ ಭವಿಷ್ಯ ನುಡಿದಿದ್ದಾರೆ.
“ಮೊದಲ ಹಂತದ ಚುನಾವಣೆ ನಿನ್ನೆ (ಶುಕ್ರವಾರ) ನಡೆದಿದ್ದು, ಮೊದಲ ಹಂತದಲ್ಲಿ ಮತದಾನವಾಗಿರುವ ರಾಜಸ್ಥಾನದ ಎಲ್ಲಾ 12 ಸ್ಥಾನಗಳು ನರೇಂದ್ರ ಮೋದಿ ಪಾಲಾಗಲಿವೆ. ರಾಜಸ್ಥಾನವು ಮೂರನೇ ಬಾರಿಗೆ ನರೇಂದ್ರ ಮೋದಿಯವರಿಗೆ ಎಲ್ಲಾ 25 ಸ್ಥಾನಗಳನ್ನು ನೀಡುವ ಮೂಲಕ ಹ್ಯಾಟ್ರಿಕ್ ಸಾಧಿಸಲಿದೆ” ಎಂದು ಶಾ ಹೇಳಿದರು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ವಿದೇಶಕ್ಕೆ ವಿಹಾರಕ್ಕೆ ಹೋಗುತ್ತಾರೆ ಎಂದು ಟೀಕಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.