ನವದೆಹಲಿ: ತನ್ನ ಭಾರತ ಭೇಟಿಯನ್ನು ಮುಂದೂಡಲಾಗಿದೆ ಎಂದು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಟೆಸ್ಲಾ ಸಂಸ್ಥೆಯ ಹೆಚ್ಚಿನ ಜವಾಬ್ದಾರಿಗಳ ಕಾರಣದಿಂದಾಗಿ ಭಾರತಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಅವರು ಏಪ್ರಿಲ್ 21 ಮತ್ತು 22 ರಂದು ಭಾರತಕ್ಕೆ ಭೇಟಿ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಿದ್ದರು. ಈ ಬಗ್ಗೆ ಅವರು ಎಕ್ಸ್ ಮೂಲಕ ಮಾಹಿತಿಯನ್ನೂ ನೀಡಿದ್ದರು. ಈ ಭೇಟಿಯು ದಕ್ಷಿಣ ಏಷ್ಯಾದ ಅತಿದೊಡ್ಡ ಮಾರುಕಟ್ಟೆಯನ್ನು ಪ್ರವೇಶಿಸುವ ಅವರ ಯೋಜನೆಗಳನ್ನು ಬಹಿರಂಗಪಡಿಸುವ ನಿರೀಕ್ಷೆಯಿತ್ತು. ಇದೀಗ ಅವರ ಭೇಟಿಯನ್ನು ಮುಂದೂಡಲಾಗಿದೆ.
ಮಸ್ಕ್ ಅವರು ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡುವ ಭರವಸೆಯಲ್ಲಿದ್ದೇನೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲು ಮಸ್ಕ್ $2 ಶತಕೋಟಿಗೂ ಹೆಚ್ಚು ಹೂಡಿಕೆಯ ಯೋಜನೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಭಾರತ ಸರ್ಕಾರವು ತನ್ನ ಇತ್ತೀಚಿನ ಕೈಗಾರಿಕಾ ನೀತಿಯಲ್ಲಿ ಕಂಪನಿಯು ಸ್ಥಳೀಯವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಆಮದು ಮಾಡಿಕೊಂಡ ಕಾರುಗಳ ಮೇಲಿನ ಸುಂಕವನ್ನು ಕಡಿಮೆ ಮಾಡುವುದಾಗಿ ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.