ನವದೆಹಲಿ: ಟೊರೊಂಟೊದಲ್ಲಿ ಅಂತಿಮ ಸುತ್ತನ್ನು ಗೆದ್ದ ನಂತರ ಡಿ ಗುಕೇಶ್ ಅವರು FIDE ಕ್ಯಾಂಡಿಡೇಟ್ಸ್ ಚೆಸ್ ಟೂರ್ನಮೆಂಟ್ 2024 ರ ಚಾಂಪಿಯನ್ ಆಗಿ ಸೋಮವಾರ ಇತಿಹಾಸವನ್ನು ನಿರ್ಮಿಸಿದ್ದಾರೆ. ಗುಕೇಶ್ ಕೇವಲ 17 ವರ್ಷ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ದಾಖಲೆಯಾಗಿದೆ. ಭಾರತದ ಚೆಸ್ ದಿಗ್ಗಜ ವಿಶ್ವನಾಥನ್ ಆನಂದ್ ನಂತರ ಕ್ಯಾಂಡಿಡೇಟ್ಸ್ ಟೂರ್ನಮೆಂಟ್ ಗೆದ್ದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಅವರು ವಿಶ್ವ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ಪ್ರವೇಶಿಸಿದ ಅತ್ಯಂತ ಕಿರಿಯ ಆಟಗಾರರಾಗಿದ್ದಾರೆ, ಅಲ್ಲಿ ಅವರು ಚೀನಾದ ಡಿಂಗ್ ಲಿರೆನ್ ವಿರುದ್ಧ ಸೆಣಸಿ ಅಂತಿಮವಾಗಿ ವಿಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಗುಕೇಶ್ ಒಟ್ಟು 9/14 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದರು.
ಈ ಗೆಲುವಿನೊಂದಿಗೆ 17 ವರ್ಷದ ಗ್ರ್ಯಾಂಡ್ಮಾಸ್ಟರ್ ಡಿ ಗುಕೇಶ್ ಅವರು ಪ್ರತಿಷ್ಠಿತ ಕ್ಯಾಂಡಿಡೇಟ್ಸ್ ಪಂದ್ಯಾವಳಿಯನ್ನು ಗೆದ್ದ ಅತ್ಯಂತ ಕಿರಿಯ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಹಾಲಿ ವಿಶ್ವ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ವಿರುದ್ಧ ಸ್ಪರ್ಧಿಸಲು ಅರ್ಹತೆ ಪಡೆದುಕೊಂಡಿದ್ದಾರೆ.
Standings | After Round 14 | #FIDECandidates
🇮🇳 Gukesh D is the winner of the FIDE Candidates with a score of 9/14. pic.twitter.com/BrB7szcpbd
— International Chess Federation (@FIDE_chess) April 22, 2024
Congratulations to @DGukesh for becoming the youngest challenger. The @WacaChess family is so proud of what you have done . I’m personally very proud of how you played and handled tough situations. Enjoy the moment
— Viswanathan Anand (@vishy64theking) April 22, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.