ನವದೆಹಲಿ: ಮಣಿಪುರದಲ್ಲಿ ಇಂದು 11 ಮತಗಟ್ಟೆಗಳಿಗೆ ಮರು ಮತದಾನ ನಡೆಯುತ್ತಿದೆ. ಮೊನ್ನೆಯ ಚುನಾವಣೆಯಲ್ಲಿ ಹಿಂಸಾಚಾರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಮರು ಮತದಾನ ನಡೆಯುತ್ತಿದೆ.
ಮಣಿಪುರದ ನಂತದ ಭಾರತದ ಚುನಾವಣಾ ಆಯೋಗವು ಅರುಣಾಚಲ ಪ್ರದೇಶದ ಎಂಟು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಆದೇಶಿಸಿದೆ. 2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಸಮಯದಲ್ಲಿ ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್ 19 ರಂದು ಘರ್ಷಣೆಗಳು ಭುಗಿಲೆದ್ದ ನಂತರ ಈ ಆದೇಶ ಬಂದಿದೆ.
ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮತದಾನದ ವೇಳೆ, ರಾಜ್ಯದಲ್ಲಿ ಹಿಂಸಾಚಾರ ಮತ್ತು ಇವಿಎಂ ಹಾನಿಯ ವರದಿಗಳು ಹೊರಬಿದ್ದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಯೋಗವು ಭಾನುವಾರದ ಆದೇಶದಲ್ಲಿ ಎಂಟು ಮತಗಟ್ಟೆಗಳಲ್ಲಿನ ಮತದಾನವನ್ನು ಅನೂರ್ಜಿತ ಎಂದು ಘೋಷಿಸಿತು ಮತ್ತು ಏಪ್ರಿಲ್ 24 ರಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಹೊಸದಾಗಿ ಮತದಾನ ಮಾಡಲು ಆದೇಶಿಸಿದೆ ಎಂದು ಉಪ ಮುಖ್ಯ ಚುನಾವಣಾಧಿಕಾರಿ ಲೈಕನ್ ಕೋಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.