ನವದೆಹಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕೃತಕ ಬುದ್ಧಿಮತ್ತೆ ಅಥವಾ ಎಐ ಬಳಸಿ ರಚಿಸಲಾದ ತಮ್ಮ ಡೀಪ್ಫೇಕ್ ವಿಡಿಯೋ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇತ್ತೀಚಿಗೆ ಅವರ ಡೀಪ್ಫೇಕ್ ಬಳಸಿ ಅವರು ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸಿರುವಂತೆ ವಿಡಿಯೋವೊಂದನ್ನು ಹರಿಬಿಡಲಾಗಿತ್ತು.
“ಹೌದು, ನಾವು ಪೊಲೀಸ್ ದೂರು ದಾಖಲಿಸಿದ್ದೇವೆ ಮತ್ತು ರಣವೀರ್ ಸಿಂಗ್ ಅವರ ಎಐ-ರಚಿಸಿ ಡೀಪ್ಫೇಕ್ ವೀಡಿಯೊವನ್ನು ಪ್ರಚಾರ ಮಾಡುತ್ತಿದ್ದ ಹ್ಯಾಂಡಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ” ಎಂದು ರಣವೀರ್ ಸಿಂಗ್ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈರಲ್ ಆನ್ಲೈನ್ ವೀಡಿಯೊಗಳಲ್ಲಿ, ಇಬ್ಬರು ಬಾಲಿವುಡ್ ನಟರಾದ ಅಮೀರ್ ಖಾನ್ ಮತ್ತು ರಣವೀರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿರುವುದನ್ನು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅವರು ಮಾತನಾಡಿರುವುದನ್ನು ಕಾಣಬಹುದು.
ಸಾಮಾಜಿಕ ಮಾಧ್ಯಮದಲ್ಲಿ ಅರ್ಧ ಮಿಲಿಯನ್ ವೀಕ್ಷಣೆಗಳನ್ನು ಗಳಿಸಿರುವ ಈ ವೀಡಿಯೊಗಳಲ್ಲಿ, ಅಮೀರ್ ಖಾನ್ ಮತ್ತು ಸಿಂಗ್ ಮೋದಿ ಅವರ ಆಡಳಿತದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ, ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಮತ್ತು ಪ್ರಮುಖ ಆರ್ಥಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಡೀಪ್ಫೇಕ್ ವಿಡಿಯೋ ವಿರುದ್ಧ ಈಗಾಗಲೇ ಅಮೀರ್ ಖಾನ್ ಎಫ್ಐಆರ್ ದಾಖಲು ಮಾಡಿದ್ದಾರೆ. ಇದೀಗ ರಣವೀರ್ ಸಿಂಗ್ ಅವರು ಕೂಡ ದೂರು ದಾಖಲು ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.