ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಖಂಡಿಸಿ ಮತ್ತು ಪಶ್ಚಿಮ ಬಂಗಾಳದಲ್ಲಿ ಶಾಂತಿಯುತ ಚುನಾವಣೆಯನ್ನು ಬಯಸಿ, ವಿರೋಧ ಪಕ್ಷದ ಇಂಡಿ ಒಕ್ಕೂಟದ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗವನ್ನು ಸಂಪರ್ಕಿಸಿ ದೂರು ನೀಡಿದೆ.
ಚುನಾವಣೆಗೆ ಅಭ್ಯರ್ಥಿಗಳನ್ನು ಹುಡುಕಲು ಸಾಧ್ಯವಾಗದ ಕಾರಣ ಕಾಂಗ್ರೆಸ್ ಪಕ್ಷವು ಹತಾಶಯಿಂದ ಹೇಳಿಕೆಗಳನ್ನು ನೀಡುತ್ತಿದೆ ಮತ್ತು ದಕ್ಷಿಣ ಭಾರತ- ಉತ್ತರ ಭಾರತದ ನಡುವೆ ವಿಭಜನೆಯನ್ನು ಸೃಷ್ಟಿಸಲು ಬಯಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ನಾಯಕ ತರುಣ್ ಚುಗ್ ಈ ಬಗ್ಗೆ ಮಾತನಾಡಿ, “ರಾಹುಲ್ ಗಾಂಧಿಯವರು ಭಾಷೆ ಮತ್ತು ಪ್ರದೇಶದ ಆಧಾರದ ಮೇಲೆ ಜನರನ್ನು ರೊಚ್ಚಿಗೆಬ್ಬಿಸಲು ಪಿತೂರಿ ನಡೆಸುತ್ತಿದ್ದಾರೆ, ನಾವು ಅದರ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ” ಎಂದು ಹೇಳಿದರು.
“ರಾಹುಲ್ ಸುಳ್ಳು, ಪಿತೂರಿ ಮತ್ತು ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಸರಣಿ ಹೇಳಿಕೆ ನೀಡುತ್ತಿದ್ದಾರೆ ಎಂದು ನಾವು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ” ಎಂದು ಅವರು ಹೇಳಿದರು.
ಇನ್ನೊಂದೆಡೆ , ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ವಂಚಕರಿಗೆ ಮರುಹಂಚಿಕೆ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಸಂಪರ್ಕಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.