ಇಸ್ಲಾಮಾಬಾದ್: ಪಾಕಿಸ್ಥಾನಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ಕಾಶ್ಮೀರ ವಿಷಯದಲ್ಲಿ ಭಾರತ ವಿರುದ್ಧ ನಿಲ್ಲಲು ಅಥವಾ ಪಾಕಿಸ್ಥಾನವನ್ನು ಬೆಂಬಲಿಸಲು ಇರಾನ್ ನಿರಾಕರಿಸಿದೆ. ಭಯೋತ್ಪಾದಕರ ಅಡಗುತಾಣಗಳ ಮೇಲೆ ವಾಯುದಾಳಿ ನಡೆಸಿ ತಿಂಗಳ ನಂತರ ಉಭಯ ದೇಶಗಳ ನಡುವಿನ ಹದಗೆಟ್ಟ ಬಾಂಧವ್ಯವನ್ನು ಸರಿಪಡಿಸಲು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸೋಮವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಕಾಶ್ಮೀರ ಸಮಸ್ಯೆಯನ್ನು ಪ್ರಸ್ತಾಪಿಸಿದರು. ಆದರೆ ಇರಾನ್ ಅಧ್ಯಕ್ಷರು ಶೆಹಬಾಜ್ ಷರೀಫ್ ಅವರೊಂದಿಗಿನ ಭೇಟಿಯ ನಂತರ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಕಾಶ್ಮೀರ ಸಮಸ್ಯೆಯ ಯಾವುದೇ ಪ್ರಸ್ತಾಪವನ್ನು ಮಾಡದೇ ನುಣುಚಿಕೊಂಡರು.
ಬದಲಿಗೆ ಇಬ್ರಾಹಿಂ ರೈಸಿ ಅವರು ಪ್ಯಾಲೆಸ್ಟೈನ್ ಸಮಸ್ಯೆಯನ್ನು ಎತ್ತಿದರು ಮತ್ತು ದಬ್ಬಾಳಿಕೆಯ ವಿರುದ್ಧ ಹೋರಾಡುವವರಿಗೆ ಇರಾನ್ ಹೇಗೆ ಬೆಂಬಲ ನೀಡುತ್ತಿದೆ ಎಂಬುದನ್ನು ವಿವರಿಸಿದರು.
ಈ ವರ್ಷದ ಜನವರಿಯಲ್ಲಿ ಇರಾನ್ ಬಲೂಚಿಸ್ತಾನ್ ಪ್ರಾಂತ್ಯದಲ್ಲಿನ ಭಯೋತ್ಪಾದಕರ ಅಡಗುತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ, ಪಾಕಿಸ್ತಾನವು ಇರಾನ್ನ ಸಿಯೆಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭಯೋತ್ಪಾದಕರ ಅಡಗುತಾಣಗಳ ವಿರುದ್ಧ ನಿಖರ ಮಿಲಿಟರಿ ದಾಳಿ ನಡೆಸಲು ಡ್ರೋನ್ಗಳು ಮತ್ತು ರಾಕೆಟ್ಗಳನ್ನು ಕಳುಹಿಸಿತ್ತು.
“During the joint press conference, while Pakistan’s PM Shehbaz Sharif mentioned Kashmir and thanked Iran for its stance, President Raisi of Iran, instead of explicitly naming Kashmir, stated his country’s support for ‘all UNSC resolutions against all oppression.’ However, he did… pic.twitter.com/Xvt7jQteSV
— Ghulam Abbas Shah (@ghulamabbasshah) April 22, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.