ನವದೆಹಲಿ: ಗರಿಷ್ಠ ಮತದಾರರು ‘ಮೇಲಿನ ಯಾವುದೂ ಅಲ್ಲ’ (ನೋಟಾ) ಆಯ್ಕೆಯನ್ನು ಆರಿಸಿಕೊಂಡರೆ ಚುನಾವಣೆಯನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಭಾರತದ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ನೋಟಾ ಬಗೆಗಿನ ನಿಯಮಗಳನ್ನು ಪರಿಶೀಲಿಸುವಂತೆ ಚುನಾವಣಾ ಸಮಿತಿಗೆ ಸೂಚಿಸಿದೆ.
ಶಿವ ಖೇರಾ ಎಂಬುವವರು ಅರ್ಜಿ ಸಲ್ಲಿಸಿದ್ದು, ನೋಟಾಗೆ ಗರಿಷ್ಠ ಮತ ಬಿದ್ದ ಯಾವುದೇ ಕ್ಷೇತ್ರದಲ್ಲಿ ಫಲಿತಾಂಶ ಅನೂರ್ಜಿತ ಎಂದು ಘೋಷಿಸಬೇಕು ಎಂದು ಅವರು ಕೋರಿದ್ದಾರೆ.
ಸೂರತ್ ಕ್ಷೇತ್ರವನ್ನು ಉಲ್ಲೇಖಿಸಿದ ಅವರು, ಒಬ್ಬ ಅಭ್ಯರ್ಥಿ ಕಣದಲ್ಲಿದ್ದಾರೆ ಎಂಬ ಕಾರಣಕ್ಕೆ ಅಲ್ಲಿ ಚುನಾವಣೆಯನ್ನೇ ರದ್ದುಪಡಿಸಲಾಗಿದೆ. ಆದರೆ ನೋಟಾ ಆಯ್ಕೆಯು ಅಸ್ತಿತ್ವದಲ್ಲಿರುವುದರಿಂದ ಮತದಾನ ಮಾಡಬೇಕು ಎಂದು ಒತ್ತಿ ಹೇಳಿದ್ದಾರೆ.
ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆಯುವ ಯಾವುದೇ ಅಭ್ಯರ್ಥಿಯ ಮೇಲೆ ಐದು ವರ್ಷಗಳ ನಿಷೇಧವನ್ನು ಹೇರಬೇಕೇಂಬುದನ್ನು ಅರ್ಜಿದಾರರು ಪ್ರತಿಪಾದಿಸಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆಗಳನ್ನು ಅನುಸರಿಸಿ 2013 ರಲ್ಲಿ ನೋಟಾ ಆಯ್ಕೆಯನ್ನು ಪರಿಚಯಿಸಲಾಯಿತು. ಅಂದಿನಿಂದ, ಲಭ್ಯವಿರುವ ಅಭ್ಯರ್ಥಿಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಲು ಮತ್ತು ತಮ್ಮ ಪ್ರತಿಭಟನೆಯನ್ನು ನೋಂದಾಯಿಸಲು ಮತದಾರರಿಗೆ ನೋಟಾ ಆಯ್ಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.