ಇಂಧೋರ್: ಲೋಕಸಭೆ ಚುನಾವಣೆ ಈ ಸಮಯದಲ್ಲಿ ರಾಜಕೀಯ ವಲಯದಲ್ಲಿ ಹಲವು ಮಹತ್ವದ ಘಟನೆಗಳು ಸಂಭವಿಸುತ್ತಿವೆ. ಸೂರತ್ನ ಲೋಕಸಭಾ ಅಭ್ಯರ್ಥಿ ನಾಮಪತ್ರ ವಾಪಾಸ್ ಪಡೆದ ಬಳಿಕ ಇದೀಗ ಇಂದೋರ್ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಕಣದಿಂದ ಹಿಂದೆ ಸರಿದಿದ್ದಾರೆ. ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ., ಅವರು ಆ ಹೆಜ್ಜೆ ಇಟ್ಟಿದ್ದು ಏಕೆ ಎಂಬ ಕುತೂಹಲ ಕಾಂಗ್ರೆಸ್ ಪಕ್ಷದಲ್ಲಿ ಮೂಡಿದೆ.
ಬಾಮ್ ತಮ್ಮ ನಾಮಪತ್ರವನ್ನು ಹಿಂಪಡೆದು ಇಂದು ಬಿಜೆಪಿ ಸೇರಿದ್ದಾರೆ.
ಬಾಮ್ ಅವರ ನಿರ್ಧಾರ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಾರೀ ಆಕ್ರೋಶವನ್ನು ಉಂಟು ಮಾಡಿದೆ.
“ನಾವು ವರಿಷ್ಠರಿಗೆ ಮೊದಲಿನಿಂದಲೂ ಎಚ್ಚರಿಕೆ ನೀಡಿದ್ದೆವು, ಅಕ್ಷಯ್ ಬಾಮ್ ಅವರಿಗೆ ಟಿಕೆಟ್ ನೀಡಬೇಡಿ ಎಂದು ನಮ್ಮ ನಾಯಕರಿಗೆ ಸೂಚಿಸಿದ್ದವು . ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೀಡಿ ಎಂಬುದು ನಮ್ಮ ಮನವಿಯಾಗಿತ್ತು. ಆದರೀಗ ಬಾಮ್ ಮೋಸ ಮಾಡಿದ್ದಾರೆ” ಎಂದು ಕಾಂಗ್ರೆಸ್ ಕಾರ್ಯಕರ್ತರು ಅಳಲು ತೋಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.