ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೀಸಲಾತಿಯನ್ನು ಹಿಂಪಡೆಯುವುದಾಗಿ ಹೇಳಿರುವಂತೆ ನಕಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಇಂದು ಕಾಂಗ್ರಸ್ ಕಾರ್ಯಕರ್ತನೊಬ್ಬನನ್ನುಬಂಧಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ರೀತಮ್ ಸಿಂಗ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಅಸ್ಸಾಂ ಪೊಲೀಸರು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು X ಪೋಸ್ಟ್ ಮಾಡಿ, “ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರ ಬಗೆಗಿನ ನಕಲಿ ವೀಡಿಯೊಗೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ರೀತೋಮ್ ಸಿಂಗ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದಿದದಾರೆ.
” ಗೃಹ ಸಚಿವ ಅಮಿತ್ ಶಾ ಅವರ ಉದ್ದೇಶಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ “ಬಿಜೆಪಿ ಅಧಿಕಾರಕ್ಕೆ ಬಂದರೆ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲಿದ್ದೇವೆ ಎಂದು ಅವರು ಹೇಳುತ್ತಿರುವಂತೆ ಬಿಂಬಿಸಾಗುತ್ತಿದೆ” ಎಂದಿದ್ದಾರೆ.
ಬಿಜೆಪಿ ಸೋಶಿಯಲ್ ಮೀಡಿಯಾ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಮೂಲ ಮತ್ತು ನಕಲಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅಂತಹ ನಕಲಿ ವೀಡಿಯೊಗಳನ್ನು ಹರಡದಂತೆ ತೆಲಂಗಾಣ ಕಾಂಗ್ರೆಸ್ಗೆ ಎಚ್ಚರಿಕೆ ನೀಡಿದ್ದಾರೆ.
Assam police have arrested an individual named Sri Reetom Singh in connection with the fake video involving Honorable Home Minister Sri @AmitShah
— Himanta Biswa Sarma (@himantabiswa) April 29, 2024
.@INCTelangana is spreading an edited video, which is completely fake and has the potential to cause large scale violence.
Home Minister Amit Shah spoke about removing the unconstitutional reservation given to Muslims, on the basis of religion, after reducing share of SCs/STs and… pic.twitter.com/5plMsEHCe3— Amit Malviya (@amitmalviya) April 27, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.