ಗುವಾಹಟಿ: ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪ್ರಕರಣ ದೇಶವ್ಯಾಪಿ ಭಾರೀ ಸುದ್ದಿ ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆಗೆ ಬಿಜೆಪಿಯನ್ನೂ ಟಾರ್ಗೆಟ್ ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಿಜೆಪಿ ಮಹಿಳಯರಿಗೆ ಆಗುವ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪ್ರರಕರಣದಿಂದ ಆಘಾತವಾಗಿದೆ. ಬಿಜೆಪಿಯ ನಿಲುವು ಎಂದಿಗೂ ಮಹಿಳಾ ಪರಿವಾಗಿಯೇ ಇರುತ್ತದೆ. ನಾವು ನಾರಿಶಕ್ತಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರ ವಿನಾ ಕಾರಣ ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಅವರೇ ಕಠಿಣ ಕ್ರಮ ಜರುಗಿಸಬೇಕೇ ವಿನಃ ನಮ್ಮ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ವಿಪರ್ಯಾಸವೆಂದರೆ ರಾಜ್ಯ ಸರ್ಕಾರ ಇದುವರೆಗೆ ಕಠಿಣ ಕ್ರಮವನ್ನು ಜರುಗಿಸಿಲ್ಲ. ಇದನ್ನು ಪ್ರಿಯಾಂಕ ಗಾಂಧಿ ಪ್ರಶ್ನೆ ಮಾಡಬೇಕಿತ್ತು, ಆದರೆ ಅವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ ಎಂದಿದ್ದಾರೆ.
ನಾವು ಸದಾ ಮಹಿಳಾ ಪರವಾದ ನಿಲುವು ಹೊಂದಿರುತ್ತೇವೆ, ತಪ್ಪಿತಸ್ಥ ಗಣ್ಯನೇ ಆಗಿರಲಿ ಅಥವಾ ಸಾಮಾನ್ಯನೇ ಆಗಿರಲಿ ಕಠಿಣ ಕ್ರಮ ಜಾರಿಯಾಗಬೇಕು ಎಂಬುದು ನಮ್ಮ ನಿಲುವು ಆಗಿರುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.