ನವದೆಹಲಿ: ಭಾರತದ ನೂತನ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ಮಂಗಳವಾರ ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಸಮಾರಂಭದ ವೀಡಿಯೋ ವೈರಲ್ ಆಗಿದ್ದು, ತ್ರಿಪಾಠಿ ತನ್ನ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ತಾಯಿಯ ಪಾದಗಳನ್ನು ಸ್ಪರ್ಶಿಸುವ ಮೂಲಕ ಆಶೀರ್ವಾದ ಪಡೆದಿದ್ದಾರೆ.
ವೀಡಿಯೊದಲ್ಲಿ, ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ಸಮಾರಂಭದಲ್ಲಿ ಭಾಗವಹಿಸಿದ ಅತಿಥಿಗಳಿಂದ ಶುಭಾಶಯಗಳನ್ನು ಸ್ವೀಕರಿಸುವುದನ್ನು ನೋಡಬಹುದು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳಿಂದ ಶುಭಾಶಯಗಳನ್ನು ಸ್ವೀಕರಿಸಿದ ದಿನೇಶ್ ಬಳಿಕ ನೇರವಾಗಿ ತಮ್ಮ ತಾಯಿಯ ಬಳಿ ತೆರಳಿ ಅವರ ಪಾದಕ್ಕೆರಗಿ ಆಶೀರ್ವಾದ ಪಡೆದರು. ಇದೇ ವೇಳೆ ಮಗನನ್ನು ತಬ್ಬಿಕೊಂಡು ತಾಯಿ ಆತನ ಯಶಸ್ಸಿಗೆ ಆಶೀರ್ವದಿಸಿದ್ದಾರೆ. ಮೇ 15 1964ರಲ್ಲಿ ಜನಿಸಿದ ದಿನೇಶ್ ತ್ರಿಪಾಠಿ 1985ರ ಜುಲೈ 1 ರಂದು ಭಾರತೀಯ ನೌಕಾಪಡೆಯನ್ನು ಸೇರಿದ್ದರು. 39 ವರ್ಷಗಳ ವೃತ್ತಿ ಜೀವನ್ನು ಈಗಾಗಲೇ ಪೂರೈಸಿರುವ ಅವರು ವೃತ್ತಿಜೀವನದುದ್ದಕ್ಕೂ ಅವರು ಸಂವಹನ ಮತ್ತು ಎಲೆಕ್ಟ್ರಾನಿಕ್ ವಾರ್ಫೇರ್ನಲ್ಲಿ ಪರಿಣತಿ ಪಡೆದಿದ್ದಾರೆ. ನೌಕಾ ಸೇನೆಯ ಮುಖ್ಯಸ್ಥನ ಹುದ್ದೆಗೇರುವ ಮೊದಲು ಅವರು ಪಶ್ಚಿಮ ನೌಕಾ ಕಮಾಂಡ್ನ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.