ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಲೈಂಗಿಕ ದೌರ್ಜನ್ಯದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಜರ್ಮನಿಗೆ ಹಾರಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಪ್ರಜ್ವಲ್ ಜರ್ಮನಿಗೆ ಹಾರಲು ಕೇಂದ್ರ ಸರ್ಕಾರವೇ ಅನುವು ಮಾಡಿಕೊಟ್ಟಿದೆ ಎಂಬಂತೆ ಬಿಂಬಿಸುತ್ತಿವೆ. ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಪ್ರಜ್ವಲ್ ರೇವಣ್ಣ ಅವರಿಗೆ ಜರ್ಮನಿಗೆ ತೆರಳಲು ಕೇಂದ್ರ ಯಾವುದೇ ರಾಜಕೀಯ ಅನುಮತಿಯನ್ನು ನೀಡಿಲ್ಲ ಮತ್ತು ಅವರು ಅನುಮತಿ ಕೇಳಿಯೂ ಇಲ್ಲ ಎಂದಿದೆ.
ಅವರು ರಾಜತಾಂತ್ರಿಕ ಪಾಸ್ಪೋರ್ಟ್ನಲ್ಲಿ ಜರ್ಮನಿಗೆ ಪ್ರಯಾಣಿಸಿದ್ದಾರೆ ಮತ್ತು ಸಚಿವಾಲಯದಿಂದ ಯಾವುದೇ ರಾಜಕೀಯ ಅನುಮತಿ ಕೇಳಿಲ್ಲ ಅಥವಾ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಮೊಮ್ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ಸೋದರಳಿಯ ಪ್ರಜ್ವಲ್ ರೇವಣ್ಣ ಅವರು ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವೀಡಿಯೊಗಳ ಹಿನ್ನೆಲೆಯಲ್ಲಿ ಜೆಡಿಎಸ್ನಿಂದ ಅಮಾನತುಗೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ಮತದಾನ ನಡೆದ ಒಂದು ದಿನದ ನಂತರ ಹಾಸನ ಸಂಸದ ಶನಿವಾರ ಜರ್ಮನಿಗೆ ತೆರಳಿದ್ದರು. ಕೇಂದ್ರ ಅವರ ಪ್ರಯಾಣಕ್ಕೆ ಅನುಮತಿ ನೀಡಿದ್ದು ಯಾಕೆ ಎಂದು ಪ್ರತಿಪಕ್ಷಗಳು ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸ್ಪಷ್ಟನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.