ನವದೆಹಲಿ: ತನ್ನ ನೆಲದಲ್ಲಿ ಭಾರತ ವಿರೋಧಿ ಅಂಶಗಳನ್ನು ಪೋಷಿಸುತ್ತಿರುವ ಕೆನಡಾದ ವಿರುದ್ಧ ಭಾರತ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದೆ.
ಖಲಿಸ್ತಾನ್ ಸಂಘಟನೆಯ ನಾಐಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಕುರಿತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮಾಡಿದ ಹೇಳಿಕೆಯನ್ನು ಅಲ್ಲಗೆಳೆದಿರುವ ಭಾರತ, ಈ ಹೇಳಿಕೆಗಳು ಕೆನಡಾದಲ್ಲಿ ಪ್ರತ್ಯೇಕತಾವಾದ, ಉಗ್ರವಾದ ಮತ್ತು ಹಿಂಸಾಚಾರಕ್ಕೆ ನೀಡಿರುವ ರಾಜಕೀಯ ಜಾಗವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹೇಳಿದೆ.
ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್, ಇದು ಭಾರತ-ಕೆನಡಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಲ್ಲದೆ ಕೆನಡಾದಲ್ಲಿ ಹಿಂಸಾಚಾರ ಮತ್ತು ಅಪರಾಧದ ವಾತಾವರಣವನ್ನು ಅದರ ನಾಗರಿಕರಿಗೆ ಹಾನಿಯಾಗುವಂತೆ ಉತ್ತೇಜಿಸುತ್ತದೆ ಎಂದು ಹೇಳಿದರು.
ಟ್ರುಡೊ ಅವರು ಭಾನುವಾರ ಟೊರೊಂಟೊದಲ್ಲಿ ನಡೆದ ಖಾಲ್ಸಾ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದರು ಮತ್ತು ಈ ಕಾರ್ಯಕ್ರಮದಲ್ಲಿ ಕೆಲವು ಖಲಿಸ್ತಾನ್ ಪರ ಜನರು ಭಾಗವಹಿಸಿದ್ದರು. ಇಲ್ಲಿ ಖಲಿಸ್ಥಾನ್ ಪರವಾದ ಘೋಷಣೆಗಳೂ ಮೊಳಗಿದ್ದವು.
ಈ ಘಟನೆಗೆ ಸಂಬಂಧಿಸಿದಂತೆ ಭಾರತವು ಸೋಮವಾರ ಕೆನಡಾದ ಡೆಪ್ಯುಟಿ ಹೈಕಮಿಷನರ್ ಅವರನ್ನು ಕರೆಸಿತ್ತು ಮತ್ತು ಹಲವಾರು ನಾಯಕರ ಸಮ್ಮುಖದಲ್ಲಿ ಸಮಾರಂಭದಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಎತ್ತಿದ್ದಕ್ಕಾಗಿ ತೀವ್ರ ಪ್ರತಿಭಟನೆಯನ್ನು ಸಲ್ಲಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.