ಮಂಗಳೂರು: ನಾಲ್ಕು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕ ಹಡಗು ಆಗಮಿಸಿದ್ದು, ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. ಈ ಹಡಗಿನ ಮೂಲಕ ಲಕ್ಷದ್ವೀಪಕ್ಕೆ ತೆರಳುವ ತಮ್ಮ ಬಹುದಿನಗಳ ಆಸೆಯನ್ನು ಈಡೇರಿಸಿಕೊಳ್ಳಲು ಅನೇಕರು ತುದಿಗಾಲಲ್ಲಿ ನಿಂತಿದ್ದಾರೆ.
ಕೊರೋನಾದ ಬಳಿಕ ಮೊದಲ ಬಾರಿಗೆ ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕರ ಹೈಸ್ಪೀಡ್ ಹಡಗು ಆಗಮಿಸಿದೆ. ನಾಲ್ಕು ವರ್ಷಗಳ ನಂತರ ಮತ್ತೆ ಪ್ರಯಾಣಿಕರ ಸಂಚಾರ ಪುನಾರಂಭವಾಗಿರುವುದು ಎಲ್ಲರಲ್ಲೂ ಹರ್ಷ ಮೂಡಿಸಿದೆ.
ಲಕ್ಷದ್ವೀಪದಿಂದ 150ಕ್ಕೂ ಅಧಿಕ ಪ್ರಯಾಣಿಕರು, ಒಬ್ಬರು ಪೈಲಟ್, ಒಬ್ಬರು ಚೀಫ್ ಎಂಜಿನಿಯರ್, ಒಬ್ಬರು ಅಸಿಸ್ಟೆಂಟ್ ಎಂಜಿನಿಯರ್, 8 ಮಂದಿ ಸಿಬ್ಬಂದಿಯನ್ನು ಹೊತ್ತು ಹಡಗು ಮಂಗಳೂರಿಗೆ ಆಗಮಿಸಿದೆ. ಶನಿವಾರ ಮುಂಜಾನೆ ಮರಳಿ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ.
ಹಡಗಿನ ಮೂಲಕ ಮಂಗಳೂರಿನಿಂದ ಲಕ್ಷದ್ವೀಪಕ್ಕೆ 7 ಗಂಟೆಗಳ ಪ್ರಯಾಣವಿದ್ದು, ಟಿಕೆಟ್ ದರ 450 ರೂಪಾಯಿ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.