ನವದೆಹಲಿ: ಭಾರತದೊಂದಿಗಿನ ಹದಗೆಡುತ್ತಿರುವ ಸಂಬಂಧದ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಮುಂದಿನ ವಾರ ನವದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅವರ ಭೇಟಿಯ ದಿನಾಂಕಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಉಭಯ ಆಡಳಿತಗಳು ಸಮಾಲೋಚನೆಗಳನ್ನು ನಡೆಸುತ್ತಿವೆ ಎನ್ನಲಾಗಿದೆ. ಆದರೆ ಅವರು ಮುಂದಿನ ವಾರದ ಆರಂಭದಲ್ಲಿ ಭಾರತಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.
ಚೀನಾ ಪರ ಅಧ್ಯಕ್ಷರಾದ ಮೊಹಮದ್ ಮುಯಿಝು ಅವರು ಮಾಲ್ಡೀಸ್ನಲ್ಲಿ ಅಧಿಕಾರಕ್ಕೆ ಬಂದ ಬಳಿಕ ಉಭಯ ದೇಶಗಳ ನಡುವಣ ಸಂಬಂಧ ಹದಗೆಟ್ಟಿದೆ. ಇದಕ್ಕೆ ಮುಯಿಝ ಅವರ ಭಾರತ ವಿರೋಧಿ ನೀತಿಯೇ ಕಾರಣವಾಗಿದೆ.
ಮುಯಿಝು ತಮ್ಮ ಭಾರತ-ಸ್ನೇಹಿ ಪೂರ್ವವರ್ತಿ ಇಬ್ರಾಹಿಂ ಸೋಲಿಹ್ ಅವರನ್ನು ಸೋಲಿಸಿ ಕಳೆದ ವರ್ಷ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ಅಲ್ಲಿನ ಉನ್ನತ ಮಟ್ಟದ ನಿಯೋಗ ಭೇಟಿ ನೀಡುತ್ತಿರುವುದು ಇದೇ ಮೊದಲು. ಅಧ್ಯಕ್ಷರಾದ ಬಳಿಕ ಮುಯಿಝು ಅವರು ಭಾರತದೊಂದಿಗಿನ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ನಿರ್ಬಂಧಿಸುವಂತಹ ಪ್ರಯತ್ನಗಳನ್ನು ಮಾಡುತ್ತಲೇ ಬರುತ್ತಿದ್ದಾರೆ, ಇದರ ಪರಿಣಾಮವಾಗಿ ಹಿಂದೂ ಮಹಾಸಾಗರದಲ್ಲಿ ಭಾರತದ ಸಂಬಂಧಗಳು ಪದೇ ಪದೇ ಹಾನಿಗೊಳಗಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.