ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್ಬರೇಲಿಯಿಂದ ಲೋಕಸಭಾ ಕಣಕ್ಕಿಳಿಯುತ್ತಿರುವುದು ಅಮೇಥಿ ಜನರಿಗೆ ದೊರೆತ ಜಯ ಎಂದು ಕೇಂದ್ರ ಸಚಿವೆ ಮತ್ತು ಅಮೇಥಿಯ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಬಣ್ಣಿಸಿದ್ದಾರೆ.
ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗಾಂಧಿ ಕುಟುಂಬದ ಯಾವುದೇ ಸದಸ್ಯರನ್ನು ಕಣಕ್ಕಿಳಿಸದೇ ಇರುವ ಮೂಲಕ ಕಾಂಗ್ರೆಸ್ ಪಕ್ಷವು ಸೋಲನ್ನು ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.
ಒಂದು ವಾರದ ಸಸ್ಪೆನ್ಸ್ ಮತ್ತು ಊಹಾಪೋಹಗಳ ನಂತರ, ಕಾಂಗ್ರೆಸ್ ಪಕ್ಷವು ಇಂದು ಅಮೇಥಿ ಸ್ಥಾನಕ್ಕೆ ಸ್ಪರ್ಧಿಸಲು ಗಾಂಧಿ ಕುಟುಂಬದ ನಿಕಟವರ್ತಿ ಕಿಶೋರಿ ಲಾಲ್ ಶರ್ಮಾ ಅವರ ಉಮೇದುವಾರಿಕೆಯನ್ನು ಘೋಷಿಸಿತು.
“ಗಾಂಧಿ ಕುಟುಂಬದ ಯಾವುದೇ ಸದಸ್ಯರು ಸ್ವತಃ ಅಮೇಥಿಯಿಂದ ಸ್ಪರ್ಧಿಸದಿರುವುದು ಚುನಾವಣೆಗೆ ಮುಂಚೆಯೇ ಕಾಂಗ್ರೆಸ್ ತನ್ನ ಸೋಲನ್ನು ಒಪ್ಪಿಕೊಂಡಿದೆ ಎಂಬುದರ ಸೂಚನೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಅಮೇಥಿಯ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯನ್ನು ಸೋಲಿಸಿದ್ದರು.
#WATCH | On speculations of Congress MP Rahul Gandhi contesting Lok Sabha elections on two seats, Union Minister and BJP MP from Amethi, Smriti Irani says, "Why are people who say that Amethi is the Gandhi family's bastion taking a lot of time to announce a candidate? Their lack… pic.twitter.com/HP6kYZs3HD
— ANI (@ANI) March 7, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.