ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾ ಕಾಂಗ್ರೆಸ್ ವಿರುದ್ಧ ತಮ್ಮ ಟೀಕೆಗಳನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಪಾಕಿಸ್ತಾನದೊಂದಿಗೆ ವ್ಯವಹರಿಸುವಲ್ಲಿ ದುರ್ಬಲವಾಗಿದ್ದವು ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಪಾಕಿಸ್ಥಾನದ ಬಗ್ಗೆ ಮೃದು ಧೋರಣೆಯನ್ನು ಹೊಂದಿತ್ತು, ಇದರ ಪರಿಣಾಮವಾಗಿ ಗಡಿಯಾಚೆಯಿಂದ ಭಯೋತ್ಪಾದಕ ಕೃತ್ಯಗಳು ಭಾರತವನ್ನು ಸಂಕಷ್ಟಕ್ಕೆ ದೂಡಿದವು ಎಂದಿದ್ದಾರೆ.
2014 ರ ಲೋಕಸಭಾ ಚುನಾವಣೆಯು ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಬಗೆಗಿನ ಭಾರತದ ನಿಲುವಿನಲ್ಲಿ ಗಮನಾರ್ಹ ಬದಲಾವಣೆಯನ್ನು ಗುರುತಿಸಿದೆ, ಎಲ್ಲದಕ್ಕೂ ಒಂದು ವೋಟಿನ ಶಕ್ತಿ ಕಾರಣ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಬೇಕೆಂದು ಪಾಕಿಸ್ತಾನದ ನಾಯಕರು ಪ್ರಾರ್ಥನೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಾರ್ಖಂಡ್ನ ಪಲಾಮುದಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಹಿಂದೆ, ಭಯೋತ್ಪಾದಕರು ಅಮಾಯಕರನ್ನು ಮುಕ್ತವಾಗಿ ಕೊಲ್ಲುತ್ತಿದ್ದರು ಮತ್ತು ಸರ್ಕಾರಗಳು ಪಾಕಿಸ್ತಾನಕ್ಕೆ ಪ್ರೇಮ ಪತ್ರಗಳನ್ನು ಬರೆಯುತ್ತಿದ್ದವು, ಆದರೆ ಪಾಕಿಸ್ತಾನವು ಪತ್ರಗಳಿಗೆ ಪ್ರತಿಯಾಗಿ ಇನ್ನಷ್ಟು ಭಯೋತ್ಪಾದಕರನ್ನು ಕಳುಹಿಸಿದೆ. ಆದರೆ ನಿಮ್ಮ ಒಂದು ಮತದ ಬಲದಿಂದ ನಾನು ಇವತ್ತಿನ ನವ ಭಾರತವು ಪಾಕಿಸ್ಥಾನಕ್ಕೆ ತಿರುಗೇಟು ನೀಡಿದೆ” ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.