ನವದೆಹಲಿ: ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಸಲ್ಲಿಸಿರುವ ಮುಕ್ತಾಯ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದಲಿತರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದೆ.
“ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ , ಈಗ ತೆಲಂಗಾಣ ಪೊಲೀಸರು ನ್ಯಾಯಾಲಯಕ್ಕೆ ವೆಮುಲಾ ಪ್ರಕರಣದ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ, ರೋಹಿತ್ ವೆಮುಲಾ ದಲಿತನಲ್ಲ ಮತ್ತು ಅವರ ಸಾವು ಆತ್ಮಹತ್ಯೆ ಎಂದು ತನಿಖೆಯಿಂದ ತಿಳಿದುಬಂದಿದೆ, ರಾಹುಲ್ ಗಾಂಧಿ ದಲಿತರ ಕ್ಷಮೆ ಕೇಳುತ್ತಾರೆಯೇ?” ಎಂದು ಬಿಜೆಪಿ ಪ್ರಶ್ನಿಸಿದೆ.
ವೆಮುಲಾ ಪ್ರಕರಣವನ್ನು ರಾಹುಲ್ ಗಾಂಧಿ ಅವರು ರಾಜಕೀಯಗೊಳಿಸುತ್ತಲೇ ಬಂದಿದ್ದಾರೆ, ಈಗ ಅವರು ಕ್ಷಮೆಯಾಚನೆ ಮಾಡಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಅನ್ನು ಎಕ್ಸ್ನಲ್ಲಿ ಆಗ್ರಹಿಸಿದ್ದಾರೆ.
“ರೋಹಿತ್ ವೆಮುಲ ಸಾವಿನ ಬಗ್ಗೆ ರಾಜಕೀಯ ಮಾಡಲು ರಾಹುಲ್ ಗಾಂಧಿಯವರು ಸದನದ ನೆಲವನ್ನು ತಮ್ಮ ಕೊಳಕು ರಾಜಕೀಯಕ್ಕಾಗಿ ಬಳಸಿಕೊಂಡರು. ಈಗ ತೆಲಂಗಾಣ ಪೊಲೀಸರು, ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ, ವೆಮುಲಾ ದಲಿತ ವರ್ಗಕ್ಕೆ ಸೇರಿದವರಲ್ಲ ಎಂದು ಹೇಳುವ ಮೂಲಕ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ದಲಿತರ ಕ್ಷಮೆ ಕೇಳುತ್ತಾರೆಯೇ?” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.