ನವದೆಹಲಿ: ಇತ್ತೀಚೆಗೆ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ದೆಹಲಿಯ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ದೇವ ಅವರ ಸಮ್ಮುಖದಲ್ಲಿ ಲವ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಲವ್ಲಿ ಜೊತೆಗೆ ಕಾಂಗ್ರೆಸ್ ನ ಮಾಜಿ ಶಾಸಕರಾದ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್ ಮತ್ತು ನೀರಜ್ ಬಸೋಯಾ ಮತ್ತು ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಅಮಿತ್ ಮಲಿಕ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡರು.
ಎಎಪಿ ಜೊತೆಗೆ ಕಾಂಗ್ರೆಸ್ ಮಾಡಿಕೊಂಡಿರುವ ಮೈತ್ರಿಯಿಂದ ಅಸಮಾಧಾನಗೊಂಡು ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾಗಿ ಲವ್ಲಿ ಹೇಳಿಕೊಂಡಿದ್ದಾರೆ. “ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಮೂಲಕ ರಚಿಸಲಾದ ಏಕೈಕ ಪಕ್ಷ ಎಎಪಿ. ಅದರೊಂದಿಗಿನ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿತ್ತು. ಅದರ ಹೊರತಾಗಿಯೂ, ಪಕ್ಷವು ದೆಹಲಿಯಲ್ಲಿ ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿತ್ತು” ಎಂದು ಅರವಿಂದರ್ ಸಿಂಗ್ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
Former Delhi Congress chief Arvinder Singh Lovely joins BJP
Read @ANI Story | https://t.co/55Mu0XJGTv#Congress #ArvinderSinghLovely #BJP pic.twitter.com/hXh6EZoFRs
— ANI Digital (@ani_digital) May 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.