ಅಹಮದಾಬಾದ್: ದೇಶವ್ಯಾಪಿ ಇಂದು ಮೂರನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಇಂದು ಮತದಾನ ಮಾಡಿದ್ದಾರೆ.
ಮತದಾನ ಮಾಡಿದ ಬಳಿಕ ಮಾತನಾಡಿದ ಮೋದಿ, ಲೋಕಸಭೆ ಚುನಾವಣೆಯ ಮೊದಲ ಎರಡು ಹಂತಗಳನ್ನು ಯಾವುದೇ ಹಿಂಸಾಚಾರವಿಲ್ಲದೆ ನಡೆಸಿದ ಚುನಾವಣಾ ಆಯೋಗವನ್ನು ಅಭಿನಂದಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಜನತೆಗೆ ಕರೆ ನೀಡಿದ ಮೋದಿ, ಭಾರತದ ಚುನಾವಣೆಗಳನ್ನು ನಡೆಸುತ್ತಿರುವ ವಿಧಾನವು ಇತರ ಪ್ರಜಾಪ್ರಭುತ್ವಗಳಿಗೆ ಕಲಿಕೆಯ ಪ್ರಕ್ರಿಯೆಯಾಗಿರಬಹುದು ಮತ್ತು ಇದು ಅನೇಕ ವಿಶ್ವವಿದ್ಯಾಲಯಗಳಿಗೆ ಕೇಸ್ ಸ್ಟಡಿ ವಿಷಯವಾಗಿದೆ ಎಂದು ಹೇಳಿದರು.
ಗುಜರಾತ್ನ ಗಾಂಧಿನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, “ಮತದಾನ ಮಹಾದಾನ. ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ” ಎಂದಿದ್ದಾರೆ.
Voted in the 2024 Lok Sabha elections! Urging everyone to do so as well and strengthen our democracy. pic.twitter.com/PlLCw7Fwe3
— Narendra Modi (@narendramodi) May 7, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.