ನವದೆಹಲಿ: ಭಾರತದ ಬಹುಸಂಖ್ಯಾತ ಹಿಂದೂಗಳಿಗೆ ಆಘಾತವನ್ನುಂಟು ಮಾಡುವ ವರದಿಯೊಂದು ಬಿಡುಗಡೆಯಾಗಿದೆ. ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿ ನಡೆಸಿದ ಸಮೀಕ್ಷಾ ವರದಿಯ, ಪ್ರಕಾರ ದೇಶದಲ್ಲಿ ಹಿಂದೂ ಜನಸಂಖ್ಯೆಯ ಗಣನೀಯವಾಗಿ ಕುಸಿತ ಕಂಡಿದೆ.
ಹಿಂದೂಗಳ ಜನಸಂಖ್ಯೆ ಶೇ.7.82ರಷ್ಟು ಇಳಿಕೆಯಾಗಿದೆ ಎಂದ ಅಧ್ಯಯನ ವರದಿ ಹೇಳಿದೆ. ಇದೇ ವೇಳೆ ಮುಸ್ಲಿಂ ಜನಸಂಖ್ಯೆ ಶೇಕಡಾ 43.15ರಷ್ಟು ಏರಿಕೆಯಾಗಿದೆ. ಮುಸ್ಲಿಮೇತರ ಅಲ್ಪಸಂಖ್ಯಾತರ ಜನಸಂಖ್ಯೆ ಶೇ.6.58ರಷ್ಟು ಎಂದು ವರದಿಯಾಗಿದೆ.
1950ರಲ್ಲಿ ಶೇ.84.68ರಷ್ಟಿದ್ದ ಹಿಂದೂಗಳ ಜನಸಂಖ್ಯೆ ಇದೀಗ ಶೇ.78.06 ಇಳಿಕೆಯಾಗಿದೆ. ಆದರೆ ಶೇಕಡಾ 9.84 ರಷ್ಟಿದ್ದ ಮುಸ್ಲಿಮರ ಜನಸಂಖ್ಯೆ ಶೇ.14.09ಕ್ಕೆ ಏರಿಕೆಯಾಗಿದೆ. ಅಂದರೆ ಹಿಂದೂಗಳ ಜನಸಂಖ್ಯೆಯಲ್ಲಿ ಶೇಕಡಾ 7.82ರಷ್ಟು ಕುಸಿತ ಕಂಡಿದ್ದರೆ, ಮುಸ್ಲಿಮ್ ಜನಸಂಖ್ಯೆಯಲ್ಲಿ ಶೇಕಡಾ 43.15ರಷ್ಟು ಏರಿಕೆಯಾಗಿದೆ ಎಂದು ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯಿಂದ ವರದಿ ಬಿಡುಗಡೆ ಮಾಡಿದೆ.
ಸ್ವಾತಂತ್ರ್ಯದ ಬಳಿಕದಿಂದ ದೇಶದ ಹಿಂದೂಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದು ಕಳವಳಕಾರಿ ಎನ್ನುವ ಚರ್ಚೆ ಹಲವು ವರ್ಷಗಳಿಂದ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.