ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧ ಮತ್ತು ಪ್ರಾದೇಶಿಕ ಮತ್ತು ಭದ್ರತಾ ವಿಷಯಗಳ ಎಲ್ಲಾ ಅಂಶಗಳನ್ನು ಚರ್ಚಿಸಿದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಇಬ್ಬರೂ ಸಚಿವರು ಸಾಮರ್ಥ್ಯ ನಿರ್ಮಾಣ, ತರಬೇತಿ ಮತ್ತು ವಿಪತ್ತು ಪರಿಹಾರ ಸೇರಿದಂತೆ ಒಟ್ಟಾರೆ ತೊಡಗಿಸಿಕೊಳ್ಳುವಿಕೆಯ ಭಾಗವಾಗಿರುವ ಹಲವಾರು ಇತರ ವಿಷಯಗಳ ಬಗ್ಗೆಯೂ ಗಮನಹರಿಸಿದ್ದಾರೆ ಎಂದಿದ್ದಾರೆ.
ಮಾಲ್ಡೀವ್ಸ್ ಮತ್ತು ಭಾರತದ ನಡುವಣ ಬಾಂಧವ್ಯದಲ್ಲಿ ಬಿಕ್ಕಟ್ಟು ಏರ್ಪಟ್ಟಿರುವ ನಡುವೆ ಮೂಸಾ ಅವರ ಭಾರತ ಪ್ರವಾಸ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ.
“ಆಪ್ತ ಮತ್ತು ಹತ್ತಿರದ ನೆರೆಹೊರೆಯವರಾಗಿ, ನಮ್ಮ ಸಂಬಂಧಗಳ ಅಭಿವೃದ್ಧಿಯು ಪರಸ್ಪರ ಹಿತಾಸಕ್ತಿ ಮತ್ತು ಪರಸ್ಪರ ಸೂಕ್ಷ್ಮತೆಯ ಮೇಲೆ ನಿಸ್ಸಂಶಯವಾಗಿ ಆಧರಿಸಿದೆ” ಎಂದು ಜೈಶಂಕರ್ ಅವರು ಜಮೀರ್ ಅವರೊಂದಿಗಿನ ತಮ್ಮ ಸಭೆಯ ಬಳಿಕ ತಮ್ಮ ಆರಂಭಿಕ ಹೇಳಿಕೆಯಲ್ಲಿ ತಿಳಿದರು.
ಇದು ಭಾರತದ ನೆರೆಹೊರೆ ಮೊದಲು ನೀತಿ ಮತ್ತು ಸಾಗರ ದೃಷ್ಟಿಗೆ ಹೊಂದಿಕೆಯಾಗುತ್ತದೆ ಎಂದರು. “ಇಂದು ನಮ್ಮ ಸಭೆಯು ವಿವಿಧ ಕ್ಷೇತ್ರಗಳಲ್ಲಿ ನಮ್ಮ ದೃಷ್ಟಿಕೋನಗಳ ಒಮ್ಮುಖವನ್ನು ಬಲಪಡಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಜೈಶಂಕರ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.