ಬೆಂಗಳೂರು: ಎರಡು ವರ್ಷಗಳ ಹಿಂದೆ ಜಿಹಾದಿಗಳ ಕ್ರೂರತ್ವಕ್ಕೆ ಬಲಿಯಾದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಗೆ ಬಹುದೊಡ್ಡ ಮುನ್ನಡೆ ದೊರೆತಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ಮುಸ್ತಫಾ ಪೈಚಾರ್ ಬಂಧಿತ ಪ್ರಮುಖ ಆರೋಪಿಯಾಗಿದ್ದು, ಆತನನ್ನು ಇಂದು ಬೆಳಗ್ಗೆ ಸಕಲೇಶಪುರದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಅಂಗಡಿ ಹೊಂದಿದ್ದ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಈ ಪ್ರಕರಣ ರಾಜ್ಯವ್ಯಾಪಿ ಕೋಲಾಹಲವನ್ನು ಸೃಷ್ಟಿಸಿತ್ತು. ಬಳಿಕ ಅಂದಿನ ಬಿಜೆಪಿ ಸರ್ಕಾರ ಪ್ರಕರಣವನ್ನು ಎನ್ಐಎಗೆ ವಹಿಸಿತ್ತು.
ಕಳೆದ ವರ್ಷ ಜನವರಿಯಲ್ಲಿ ಎನ್ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್ಐಎ ಚಾರ್ಜ್ಶೀಟ್ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯನ್ನು ಸೃಷ್ಟಿಸಲು ಪಿಎಫ್ಐನ ಕಾರ್ಯಸೂಚಿಯ ಭಾಗವಾಗಿ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.