ನವದೆಹಲಿ: ಚುನಾವಣೆ ದೇಶದಲ್ಲಿ ಆರಂಭವಾದ ಬಳಿಕ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಚುನಾವಣಾ ಆಯೋಗದ ಮೇಲೆ ಒಂದಲ್ಲ ಒಂದು ರೀತಿಯ ಆರೋಪಗಳನ್ನು ಮಾಡುತ್ತಲೇ ಬರುತ್ತಿದೆ. ಇತ್ತೀಚಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತದಾನದ ದತ್ತಾಂಶದ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿ ತಮ್ಮ ಇಂಡೊ ಒಕ್ಕೂಟಕ್ಕೆ ಪತ್ರ ಬರೆದಿದ್ದರು. ಈ ನಡೆಯನ್ನು ಚುನಾವಣಾ ಆಯೋಗ ತೀವ್ರವಾಗಿ ಖಂಡಿಸಿದೆ.
ಮತದಾನದ ದತ್ತಾಂಶದಲ್ಲಿ ವ್ಯತ್ಯಾಸಗಳಿವೆ ಎಂದು ಆರೋಪಿಸಿ ಇಂಡಿ ಒಕ್ಕೂಟಕ್ಕೆ ಪತ್ರ ಬರೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಭಾರತೀಯ ಚುನಾವಣಾ ಆಯೋಗದ ವಿಶ್ವಾಸಾರ್ಹತೆ “ಸಾರ್ವಕಾಲಿಕ ಕೆಳಮಟ್ಟದಲ್ಲಿದೆ” ಎಂದು ಹೇಳಿ ಖರ್ಗೆ ಅವರು ಬರೆದ ಪತ್ರಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಚುನಾವಣಾ ಸಮಿತಿಯು ಕಾಂಗ್ರೆಸ್ ಅಧ್ಯಕ್ಷರು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದೆ.
ಮುಕ್ತ ಮತ್ತು ನ್ಯಾಯಸಮ್ಮತವಾದ ಮತದಾನವನ್ನು ನಡೆಸುವಲ್ಲಿ ಗೊಂದಲ, ತಪ್ಪು ನಿರ್ದೇಶನ ಮತ್ತು ಅಡೆತಡೆಗಳನ್ನು ಸೃಷ್ಟಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕಿಡಿಕಾರಿದೆ. ಖರ್ಗೆಯವರ ಪತ್ರವು ರಾಜಕೀಯ ಗುಂಪಿನೊಳಗಿನ ಆಂತರಿಕ ಪತ್ರವ್ಯವಹಾರದ ರೂಪದಲ್ಲಿರಬೇಕಿತ್ತು, ಆದರೆ ಅವರು ಅದನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದಿದೆ. ಅವರ ಪ್ರಶ್ನೆಯನ್ನು ಖಂಡಿಸಿರುವ ಇಸಿ, ಇದು ಅಂತಿಮ ಫಲಿತಾಂಶಗಳ ಬಗ್ಗೆ ಅನುಮಾನಗಳು ಮತ್ತು ಅಸಂಗತತೆಯ ಜೊತೆಗೆ ಅರಾಜಕ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ಎಚ್ಚರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.