ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಲು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಕಡೆಯಿಂದ ತಡರಾತ್ರಿ ಡ್ರೋನ್ನ ಚಲನೆಯನ್ನು ಬಿಎಸ್ಎಫ್ನ ಪಡೆಗಳು ಪತ್ತೆಹಚ್ಚಿದವು ಮತ್ತು ಸುಮಾರು 12 ಸುತ್ತು ಗುಂಡು ಹಾರಿಸಿದವು ಎಂದು ಅವರು ಶನಿವಾರ ತಿಳಿಸಿದ್ದಾರೆ. ಆದರೆ, ಡ್ರೋನ್ ಅನ್ನು ಮತ್ತೆ ಪಾಕಿಸ್ತಾನದ ಕಡೆಗೆ ಓಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಯಾವುದೇ ಶಸ್ತ್ರಾಸ್ತ್ರಗಳು ಅಥವಾ ಮಾದಕ ದ್ರವ್ಯಗಳನ್ನು ಕೆಳಕ್ಕೆ ಬೀಳಿಸಲಿಲ್ಲ ಎಂದು ಖಚಿತಪಡಿಸಿಕೊಳ್ಳಲು ಗಡಿ ಹೊರಠಾಣೆ ದಲ್ಲಿ ಶೋಧ ನಡೆಸಲಾಗುತ್ತಿದೆ. ಶನಿವಾರ ಬೆಳಿಗ್ಗೆ ರಾಮ್ಘರ್ ಸೆಕ್ಟರ್ನ ನಾರಾಯಣಪುರದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಪಾಕಿಸ್ಥಾನದ ಡ್ರೋನ್ ಭಾರತದ ಕಡೆಗೆ ಬರುವುದು ಮತ್ತು ಅದನ್ನು ಸೇನೆ ಹೊಡೆದುರುಳಿಸುವುದು ಈಗ ನಿತ್ಯದ ಘಟನೆಯಾಗುತ್ತಿದೆ. ಪಂಜಾಬ್ನ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯ ಬಳಿ ಮೂರು ಪ್ರತ್ಯೇಕ ಘಟನೆಗಳಲ್ಲಿ ಡ್ರೋನ್ ಮತ್ತು ಎರಡು ಹೆರಾಯಿನ್ ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಕಳೆದ ವಾರ ತಿಳಿಸಿದ್ದರು. ಗಡಿ ಭದ್ರತಾ ಪಡೆ ಇತ್ತೀಚೆಗೆ ತರ್ನ್ ತರಣ್ ಜಿಲ್ಲೆಯ ಕಾಲಿಯಾ ಗ್ರಾಮದ ಹೊಲವೊಂದರಲ್ಲಿ ಮುರಿದ ಸ್ಥಿತಿಯಲ್ಲಿದ್ದ ಡ್ರೋನ್ ಅನ್ನು ವಶಪಡಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.