ನವದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಳ್ಳಿಹಾಕಿದ್ದಾರೆ. ಸರ್ಕಾರವು ಎಂದಿಗೂ ಸಂವಿಧಾನವನ್ನು ಬದಲಾಯಿಸುವುದಿಲ್ಲ ಅಥವಾ ಮೀಸಲಾತಿಯನ್ನು ಕೊನೆಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮವೊಂದಕ್ಕೆ ವಿಶೇಷ ಸಂದರ್ಶನದಲ್ಲಿ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಎರಡು ಚುನಾವಣೆಗಳನ್ನು ಪೂರ್ಣ ಬಹುಮತದೊಂದಿಗೆ ಗೆದ್ದಿದ್ದಾರೆ ಮತ್ತು ಸಂವಿಧಾನವನ್ನು ಬದಲಾಯಿಸುವುದು ಅವರ ಅಜೆಂಡಾವಾಗಿದ್ದರೆ, ಅವರು ಅದನ್ನು ಸುಲಭವಾಗಿ ಮಾಡಬಹುದಿತ್ತು ಎಂದಿದ್ದಾರೆ.
“ಮೋದಿಯವರು ಎರಡು ಬಾರಿ ಪ್ರಧಾನಿಯಾದರು. ಅವರು ಎರಡು ಬಾರಿ ಸ್ಪಷ್ಟ ಜನಾದೇಶವನ್ನು ಹೊಂದಿದ್ದರು. ಹಾಗಾಗಿ ಬಿಜೆಪಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಅಥವಾ ಮೀಸಲಾತಿಯನ್ನು ತೆಗೆದುಹಾಕಲು ಬಯಸಿದರೆ, ನಮ್ಮನ್ನು ಯಾರು ತಡೆಯಬಹುದಿತ್ತು?” ಅಮಿತ್ ಶಾ ಪ್ರಶ್ನೆ ಮಾಡಿದ್ದಾರೆ.
ಬದಲಿಗೆ ನಾವು ನಮ್ಮ ಬಹುಮತವನ್ನು 370 ನೇ ವಿಧಿ, ತ್ರಿವಳಿ ತಲಾಖ್, ರಾಮಮಂದಿರ ನಿರ್ಮಾಣ, ಸರ್ಜಿಕಲ್ ಸ್ಟ್ರೈಕ್ ನಡೆಸಲು, ಚಂದ್ರಯಾನವನ್ನು ಇಳಿಸಲು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 130 ಕೋಟಿ ಉಳಿಸಲು, 60 ಕೋಟಿ ಜನರಿಗೆ ಶೌಚಾಲಯ, ಅಡುಗೆ ಅನಿಲ, ಮನೆ ಒದಗಿಸಲು ಬಳಸಿದ್ದೇವೆ. ಕುಡಿಯುವ ನೀರು, ವಿದ್ಯುತ್ ಸರಬರಾಜು, ಉಚಿತ ಪಡಿತರ ನೀಡಿದ್ದೇವೆ ಎಂದು ಅವರು ಹೇಳಿದರು.
ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡರೆ ಸಂವಿಧಾನವನ್ನು ಹರಿದು ಬಿಸಾಡುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ ನಂತರ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.