ಮಾಲೆ: ಭಾರತದಿಂದ ಉಡುಗೊರೆಯಾಗಿ ಪಡೆದ ರಕ್ಷಣಾ ವಿಮಾನಗಳನ್ನು ನಿರ್ವಹಣೆ ಮಾಡಲು ಮಾಲ್ಡೀವ್ಸ್ ಬಳಿ ನುರಿತ ಪೈಲೆಟ್ಗಳು ಇಲ್ಲ ಎಂಬ ಅಂಶ ಇದೀಗ ಬಹಿರಂಗವಾಗಿದೆ. ಸ್ವತಃ ಅಲ್ಲಿನ ರಕ್ಷಣಾ ಸಚಿವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಪ್ರಸ್ತುತ ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆ (MNDF)ಯು ಭಾರತೀಯ ಸೇನೆಯಿಂದ ದೇಣಿಯಾಗಿ ಪಡೆದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಮಾಲ್ಡೀವ್ಸ್ ರಕ್ಷಣಾ ಸಚಿವ ಘಾಸನ್ ಮೌಮೂನ್ ಹೇಳಿದ್ದಾರೆ.
ಅಧ್ಯಕ್ಷರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಘಾಸನ್, ಮಾಲ್ಡೀವ್ಸ್ನಲ್ಲಿ ನೆಲೆಸಿದ್ದ 76 ಭಾರತೀಯ ಸೈನಿಕರನ್ನು ಇತ್ತೀಚೆಗೆ ವಾಪಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ವಿಮಾನವನ್ನು ಇನ್ನು ಮುಂದೆ ಭಾರತದ ನಾಗರಿಕರು ನಿರ್ವಹಿಸಲಿದ್ದಾರೆ ಎಂದಿದ್ದಾರೆ.
ಹಿಂದಿನ ಸರ್ಕಾರಗಳು ಮಾಡಿಕೊಂಡ ಒಪ್ಪಂದಗಳ ಅಡಿಯಲ್ಲಿ ಕೆಲವು ಮಾಲ್ಡೀವಿಯನ್ ಸೈನಿಕರು ಡೋರ್ನಿಯರ್ ವಿಮಾನ ಮತ್ತು ಎರಡು ಹೆಲಿಕಾಪ್ಟರ್ಗಳನ್ನು ನಿರ್ವಹಿಸಲು ತರಬೇತಿಯನ್ನು ಪ್ರಾರಂಭಿಸಿದ್ದಾರೆ. ಆದರೆ ಯಾರೂ ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ತರಬೇತಿಯನ್ನು ಪೂರ್ಣಗೊಳಿಸಿಲ್ಲ ಎಂದು ಚೀನಾ ಪರವಾದ ಮುಯಿಜ್ಜು ಸರ್ಕಾರದ ಸಚಿವರು ವಿವರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.