ನವದೆಹಲಿ: ಕೇಂದ್ರ ಸರ್ಕಾರವು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್ಟಿಟಿಇ) ಮೇಲಿನ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ಅದು ಹೇಳಿದೆ.
ಎಲ್ಟಿಟಿಇ ಸಂಘಟನೆ ಜನಸಾಮಾನ್ಯರಲ್ಲಿ ಪ್ರತ್ಯೇಕತಾ ಪ್ರವೃತ್ತಿಯನ್ನು ಬೆಳೆಸುತ್ತಿದೆ ಮತ್ತು ಭಾರತದಲ್ಲಿ, ವಿಶೇಷವಾಗಿ ತಮಿಳುನಾಡಿನಲ್ಲಿ ಅದಕ್ಕೆ ಬೆಂಬಲದ ನೆಲೆಯನ್ನು ಹೆಚ್ಚಿಸುತ್ತಿದೆ ಎಂಬ ಕಾರಣವನ್ನು ನೀಡಿ ಕೇಂದ್ರ ಅದರ ಮೇಲಿನ ನಿಷೇಧವನ್ನು ಐದು ವರ್ಷಗಳವರೆಗೆ ವಿಸ್ತರಣೆ ಮಾಡಿದೆ.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಸೆಕ್ಷನ್ 3 ರ ಉಪ-ವಿಭಾಗಗಳು (1) ಮತ್ತು (3) ಅನ್ನು ಅನ್ವಯಿಸಿ ಕೇಂದ್ರ ಗೃಹ ಸಚಿವಾಲಯವು ನಿಷೇಧವನ್ನು ವಿಧಿಸಿದೆ. ದೇಶದ ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ಎಲ್ಟಿಟಿಇ ಇನ್ನೂ ತೊಡಗಿಸಿಕೊಂಡಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ ಎಂದು ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.