ವಾರಣಾಸಿ: ‘ನುಸುಳುಕೋರರು’ ಮತ್ತು ‘ಹೆಚ್ಚು ಮಕ್ಕಳಿರುವವರು’ ಎಂಬ ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ, ಪ್ರತಿಯೊಂದು ಬಡ ಕುಟುಂಬದ ಬಗ್ಗೆಯೂ ಮಾತನಾಡಿದ್ದು ಎಂಬುದಾಗಿ ಹೇಳಿದ್ದಾರೆ.
ಹಿಂದೂ-ಮುಸ್ಲಿಂ ಎಂದು ವಿಭಜಿಸಿ ಮಾತನಾಡುವ ದಿನ ನಾನು ಸಾರ್ಜಜನಿಕ ಜೀವನಕ್ಕೆ ಅನರ್ಹನಾಗಿರುತ್ತೇನೆ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 18 ಗೆ ನೀಡಿದ ಸಂದರ್ಶನದಲ್ಲಿ, ಪ್ರಧಾನಿ ಮೋದಿ ಅವರು ಮುಸ್ಲಿಮರ ಮೇಲಿನ ಪ್ರೀತಿಯನ್ನು ನಾನು ಮಾರಾಟ ಮಾಡುವುದಿಲ್ಲ ಎಂದು ಹೇಳಿದರು. “ನಾನು ವೋಟ್ ಬ್ಯಾಂಕ್ಗಾಗಿ ಕೆಲಸ ಮಾಡುವುದಿಲ್ಲ. ನಾನು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಅನ್ನು ನಂಬುತ್ತೇನೆ” ಎಂದರು.
“ನಾನು ಹೆಚ್ಚು ಮಕ್ಕಳಿರುವವರ ಬಗ್ಗೆ ಮಾತನಾಡುವಾಗ, ಅದು ಮುಸ್ಲಿಮರು ಎಂದು ಯಾರು ಹೇಳಿದರು? ನೀವು ಮುಸ್ಲಿಮರಿಗೆ ಏಕೆ ಅನ್ಯಾಯ ಮಾಡುತ್ತಿದ್ದೀರಿ? ಬಡ ಕುಟುಂಬಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಬಡತನ ಇರುವಲ್ಲಿ, ಹೆಚ್ಚು ಮಕ್ಕಳು ಇರುತ್ತದೆ. ಜನರ ಸಾಮಾಜಿಕ ವಲಯವನ್ನು ಲೆಕ್ಕಿಸದೆ ಈ ಪರಿಸ್ಥಿತಿ ಇದೆ”ಎಂದು ಪ್ರಧಾನಿ ಹೇಳಿದರು.
ತಾವು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್ನಲ್ಲಿ ನಡೆದ ಗೋಧ್ರಾ ನಂತರದ ಗಲಭೆಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, 2002 (ಗೋಧ್ರಾ ಗಲಭೆ) ನಂತರ ನನ್ನ ವಿರೋಧಿಗಳು ಮುಸ್ಲಿಮರಲ್ಲಿ ನನ್ನ ಇಮೇಜ್ಗೆ ಕಳಂಕ ತಂದಿದ್ದಾರೆ ಎಂದು ಹೇಳಿದರು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ದೇಶದ ಜನತೆ ನನಗೆ ಮತ ಹಾಕುತ್ತಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.