ನವದೆಹಲಿ: ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು, ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ನಡೆದ ಅನುಚಿತ ಘಟನೆಯ ತನಿಖೆಗೆ ಒತ್ತಾಯಿಸಿದರು.
ಇತ್ತೀಚಿಗೆ ಸಿಎಂ ಕಚೇರಿಯಲ್ಲೇ ಕೇಜ್ರಿವಾಲ್ ಆಪ್ತ ಸಹಾಯಕ ಮಲಿವಾಲ್ ವಿರುದ್ಧ ಅನುಚಿತ ವರ್ತನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೇಜ್ರಿವಾಲ್ ಮೌನ ಬಿಜೆಪಿಯನ್ನು ಕೆರಳಿಸಿದೆ.
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವಾ ಅವರು, ಸ್ವಾತಿ ಅವರ ಮೇಲೆ ನಡೆದ ದೌರ್ಜನ್ಯದ ಘಟನೆಯ ಬಗ್ಗೆ ಕೇಜ್ರಿವಾಲ್ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
“ಇದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆಯಾಗಿರುವ ಸ್ವಾತಿ ಮಲಿವಾಲ್ ಅವರಿಗೆ ಸಂಬಂಧಿಸಿದ ವಿಷಯವಾದರೂ ಮಹಿಳೆಯ ಗೌರವ ಮತ್ತು ಘನತೆಯ ವಿಷಯವಾಗಿದೆ. ನಾವು ಅವರನ್ನು ಬೆಂಬಲಿಸಲು ಇಲ್ಲಿದ್ದೇವೆ. ಎಎಪಿ ನಾಯಕ ಸಂಜಯ್ ಸಿಂಗ್ ಘಟನೆಯನ್ನು ಒಪ್ಪಿಕೊಂಡಿದ್ದಾರೆ. ಕೇಜ್ರಿವಾಲ್ ಅವರ ವಿರುದ್ಧ ಏಕೆ ಪೊಲೀಸ್ ದೂರು ನೀಡುತ್ತಿಲ್ಲ? ಅವರ ಆಪ್ತ ಕಾರ್ಯದರ್ಶಿಯೇ ಈ ಕೃತ್ಯ ಎಸಗಿದ್ದಾನೆ” ಎಂದು ಸಚ್ದೇವ ಹೇಳಿದ್ದಾರೆ.
ಘಟನೆಯನ್ನು ದೃಢಪಡಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಬಹುದು . ಘಟನೆಯ ಬಗ್ಗೆ ಇದುವರೆಗೆ ಮೌನ ವಹಿಸಿರುವ ಮಲಿವಾಲ್ ಪೊಲೀಸರಿಗೆ ಹೇಳಿಕೆ ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.