ನವದೆಹಲಿ: 6ಜಿ ತಂತ್ರಜ್ಞಾನವು ರಾಷ್ಟ್ರದ ಡಿಜಿಟಲ್ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಕಾರ್ಯದರ್ಶಿ ಎಸ್. ಕೃಷ್ಣನ್ ಹೇಳಿದ್ದಾರೆ.
ನವದೆಹಲಿಯಲ್ಲಿ ಭಾರತ್ 6G 2024 ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಕೃಷ್ಣನ್, 6G ತಂತ್ರಜ್ಞಾನದ ಬೆಳವಣಿಗೆಯು ಮೊದಲ ಕೈಗಾರಿಕಾ ಕ್ರಾಂತಿಯಂತೆಯೇ ಪರಿಣಾಮ ಬೀರಬಹುದು. 6G ದೊಡ್ಡ ಡೇಟಾ ಉತ್ಪಾದನೆಗೆ ಕಾರಣವಾಗುತ್ತದೆ ಮತ್ತು ಇದು ಕೃತಕ ಬುದ್ಧಿಮತ್ತೆಯನ್ನು ಕಲಿಯಲು ಮತ್ತು ಚುರುಕುಗೊಳಿಸಲು ಉತ್ತಮ ಇನ್ಪುಟ್ ಅನ್ನು ಒದಗಿಸುತ್ತದೆ ಎಂದು ಅವರು ಹೈಲೈಟ್ ಮಾಡಿದ್ದಾರೆ.
ಉತ್ತಮ ಡಿಜಿಟಲ್ ಮೂಲಸೌಕರ್ಯಕ್ಕಾಗಿ ಸಹಕರಿಸುವಂತೆ ಕೃಷ್ಣನ್ ಸಮ್ಮೇಳನದಲ್ಲಿ ಉದ್ಯಮದ ಪ್ರಮುಖರನ್ನು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.