ನವದೆಹಲಿ: ಬಿಜೆಪಿ ಸರ್ಕಾರವು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಹಿಂಪಡೆಯಲು ಬದ್ಧವಾಗಿದೆ ಮತ್ತು ಪಾಕಿಸ್ತಾನದಿಂದ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಶಾ, ಪಿಒಜೆಕೆ ಜನರು ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಭಾರತದ ಬೆಂಬಲಕ್ಕೆ ಒತ್ತಾಯಿಸುತ್ತಿದ್ದಾರೆ ಎಂದಿದ್ದಾರೆ.
ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆಯ ಹೆಚ್ಚಳದ ಕುರಿತು ಮಾತನಾಡಿದ ಗೃಹ ಸಚಿವರು, ಎರಡು ಕೋಟಿ ಪ್ರವಾಸಿಗರು ಕಾಶ್ಮೀರಕ್ಕೆ ಬಂದು ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ ಎಂದರು.
ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ ಶಾ, ಮಮತಾ ದೀದಿ, ಕಾಂಗ್ರೆಸ್ ಸಿಂಡಿಕೇಟ್ 370 ನೇ ವಿಧಿಯನ್ನು ತೆಗೆದುಹಾಕಬೇಡಿ ಎಂದು ಕೇಳುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟಿಕಲ್ 370 ಅನ್ನು ರದ್ದುಗೊಳಿಸಿದರು ಮತ್ತು ಕಾಶ್ಮೀರವನ್ನು ಭಾರತದ ಉಳಿದ ಭಾಗಗಳಿಗೆ ವಿಲೀನಗೊಳಿಸಿದರು. ಈಗ ಅಲ್ಲಿ ಬದಲಾವಣೆಯ ಪರ್ವವನ್ನು ಕಾಣಬಹುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.