ನವದೆಹಲಿ: ಭಾರತದ ಅತ್ಯಂತ ಹೆಮ್ಮೆಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಅಂತರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ.
39 ರ ಹರೆಯದ ಛೆಟ್ರಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ವೀಡಿಯೊದ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಭಾರತದ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯವು ಅವರ ಕೊನೆಯ ಪಂದ್ಯವಾಗಿದೆ ಎಂದು ಉಲ್ಲೇಖಿಸಿದ್ದಾರೆ.
“ಕಳೆದ 19 ವರ್ಷಗಳ ನೆನಪುಗಳು ಕರ್ತವ್ಯ, ಒತ್ತಡ ಮತ್ತು ಅಪಾರ ಸಂತೋಷದ ಸಂಯೋಜನೆಯಾಗಿದೆ. ನಾನು ದೇಶಕ್ಕಾಗಿ ಆಡುತ್ತೇನೆ ಎಂದು ಯೋಚಿಸಿರಲಿಲ್ಲ. ಒಳ್ಳೆಯದೋ ಅಥವಾ ಕೆಟ್ಟದೋ ನಾನು ಆಟಗಳನ್ನು ಆಡಿದ್ದೇನೆ. ಬಹುಶಃ ಕುವೈತ್ ವಿರುದ್ಧದ ಒಂದ್ಯ ನನ್ನ ಕೊನೆಯ ಪಂದ್ಯವಾಗಲಿದೆ” ಎಂದು ಛೆಟ್ರಿ ಹೇಳಿದ್ದಾರೆ.
I’d like to say something… pic.twitter.com/xwXbDi95WV
— Sunil Chhetri (@chetrisunil11) May 16, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.