ನವದೆಹಲಿ: ಮುಂಬರುವ T20 ವಿಶ್ವಕಪ್ಗಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್ಮೆಂಟ್ ತನ್ನ ಜರ್ಸಿಯನ್ನು ಕರ್ನಾಟಕದ ನಂದಿನಿ ಡೈರಿಯ ಲೋಗೋದೊಂದಿಗೆ ಅನಾವರಣಗೊಳಿಸಿದೆ. ನಂದಿನಿ ಬ್ರಾಂಡ್ ಅನ್ನು ನಡೆಸುತ್ತಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸ್ಕಾಟ್ಲೆಂಡ್ ತಂಡದ ಅಧಿಕೃತ ಪ್ರಾಯೋಜಕನಾಗಿದೆ ಮತ್ತು ನಂದಿನಿ ಹಾಲಿನ ಬ್ರ್ಯಾಂಡ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾಣಿಸಿಕೊಂಡಿರುವುದು ಇದೇ ಮೊದಲು.
ಬುಧವಾರ ಬಿಡುಗಡೆಯಾದ ಆಟಗಾರರ ಟೀ ಶರ್ಟ್ಗಳ ತೋಳುಗಳ ಮೇಲೆ ಕನ್ನಡದಲ್ಲಿ ಬರೆಯಲಾದ ಬ್ರಾಂಡ್ ಹೆಸರು ಮತ್ತು ಲೋಗೋ ಕಂಡುಬಂದಿದೆ. ಇದು ಕನ್ನಡಿಗರಲ್ಲಿ ಹೆಮ್ಮೆ ಮೂಡಿಸಿದೆ.
ನಂದಿನಿ ಐರ್ಲೆಂಡ್ ಕ್ರಿಕೆಟ್ ತಂಡದ ಅಧಿಕೃತ ಪ್ರಾಯೋಜಕನಾಗಿದ್ದು, ಈ ತಂಡ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ನಡೆಯಲಿರುವ T20 ವಿಶ್ವಕಪ್ನಲ್ಲಿ ಆಡಲಿದೆ.
ಈ ಹಿಂದೆ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್, ನಾವು ಟಿ20 ವಿಶ್ವಕಪ್ನಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲಿದ್ದೇವೆ. ಪಂದ್ಯಗಳ ಸಮಯದಲ್ಲಿ ನಮ್ಮ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಾಗುತ್ತದೆ ಎಂದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.